ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; [QBR] ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. [QBR]
2. ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; [QBR] ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. [QBR]
3. ಕರ್ತನೇ, ಕರುಣಿಸು; [QBR] ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. [QBR]
4. ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; [QBR] ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. [QBR]
5. ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, [QBR] ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. [QBR]
6. ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; [QBR] ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. [QBR]
7. ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, [QBR] ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. [QBR]
8. ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; [QBR] ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. [QBR]
9. ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, [QBR] ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. [QBR]
10. ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; [QBR] ನೀನೊಬ್ಬನೇ ದೇವರು. [QBR]
11. ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; [QBR] ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. [QBR] ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. [QBR]
12. ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QBR] ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. [QBR]
13. ನೀನು ಬಹಳವಾಗಿ ಕನಿಕರಿಸಿ, [QBR] ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. [QBR]
14. ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; [QBR] ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. [QBR] ಅವರು ನಿನ್ನನ್ನು ಲಕ್ಷಿಸುವುದಿಲ್ಲ. [QBR]
15. ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; [QBR] ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. [QBR]
16. ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; [QBR] ನಿನ್ನ ಸೇವಕಳ ಮಗನನ್ನು ರಕ್ಷಿಸು. [QBR]
17. ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; [QBR] ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ [QBR] ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 86 / 150
ಕೀರ್ತನೆಗಳು 86:175
1 ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ. 2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. 3 ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ. 4 ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ. 5 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. 6 ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು. 7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. 8 ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ. 9 ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು. 10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. 11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು. 12 ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು. 13 ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ. 14 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ. 15 ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು. 16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು. 17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 86 / 150
Common Bible Languages
West Indian Languages
×

Alert

×

kannada Letters Keypad References