1. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; [QBR] ನನ್ನ ಬಾಯಿ ನಿನ್ನ ಸತ್ಯವನ್ನು, [QBR] ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು. [QBR]
2. ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; [QBR] ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ. [QBR]
3. ನೀನು ನುಡಿದದ್ದೇನೆಂದರೆ, “ನಾನು ಆರಿಸಿಕೊಂಡ [QBR] ಸೇವಕನಾದ ದಾವೀದನ ಸಂಗಡ ಒಡಂಬಡಿಕೆ ಮಾಡಿಕೊಂಡು ಆಣೆಯಿಟ್ಟು, [QBR]
4. ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು, [QBR] ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು [QBR] ಎಂದು ಹೇಳಿದ್ದೇನೆ’ ” ಎಂಬುವುದೇ. ಸೆಲಾ
5. ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು; [QBR] ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು. [QBR]
6. ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? [QBR] ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು? [QBR]
7. ಆತನು ಪರಿಶುದ್ಧರ ಸಭೆಯಲ್ಲಿ ಘನ ಹೊಂದುವ ದೇವರು; [QBR] ತನ್ನ ಎಲ್ಲಾ ಪರಿವಾರದವರಿಗಿಂತ ಭಯಂಕರನು. [QBR]
8. ಯೆಹೋವನೇ, ಸೇನಾಧೀಶ್ವರನಾದ ದೇವರೇ, [QBR] ನಿನಗೆ ಸಮಾನರು ಯಾರು? [QBR] ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು. [QBR]
9. ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; [QBR] ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು. [QBR]
10. ರಹಬನ್ನು [* ರಹಬನ್ನು ಪೌರಾಣಿಕ ಸಮುದ್ರ ದೈತ್ಯ ರಹಬನು ಯೋಬ. 9:13; 26:2; ಯೆಶಾ 51:9 ರಲ್ಲಿ ಕೂಡ ಉಲ್ಲೇಖಿಸಲಾಗಿದೆ; 87:4 ರಲ್ಲಿ ಅದರ ಬಳಕೆಯು ಭಿನ್ನವಾಗಿದೆ, ಇಲ್ಲಿ ರಹಬ ಕಡಲ ಪೌರಾಣಿಕ ಸರ್ಪವನ್ನು ಸೂಚಿಸುತ್ತದೆ.] ಛೇದಿಸಿ ಸಾಯಿಸಿದವನು ನೀನು; [QBR] ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ. [QBR]
11. ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; [QBR] ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು. [QBR]
12. ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. [QBR] ತಾಬೋರ್ [† ತಾಬೋರ್ ತಾಬೋರ್ ಗಲಿಲಾಯ ಸರೋವರದ ದಕ್ಷಿಣದ ತುದಿಯಲ್ಲಿರುವ ಪರ್ವತವಾಗಿದೆ, 555 ಮೀಟರ್ ಎತ್ತರವಿದೆ.] , ಹೆರ್ಮೋನ್ [‡ ಹೆರ್ಮೋನ್ ಹೆರ್ಮೋನ್ ಪರ್ವತವು ಗಲಿಲಾಯ ಸರೋವರದಿಂದ 75 ಕಿಲೋಮೀಟರ್ (45 ಮೈಲುಗಳು) ಈಶಾನ್ಯ ಭಾಗದಲ್ಲಿದೆ, ಸುಮಾರು 2,750 ಮೀಟರ್ (8,940 ಅಡಿ) ಎತ್ತರವಿದೆ.] ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ. [QBR]
13. ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; [QBR] ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ. [QBR]
14. ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; [QBR] ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ. [QBR]
15. ಉತ್ಸಾಹಧ್ವನಿಯನ್ನು [§ ಉತ್ಸಾಹಧ್ವನಿಯನ್ನು ಅಂದರೆ ದೇವರನ್ನು ಆರಾಧಿಸುವಾಗ ಮಾಡುವ ಶಬ್ದ.] ತಿಳಿದಿರುವ ಜನರು ಧನ್ಯರು; [QBR] ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ. [QBR]
16. ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; [QBR] ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ. [QBR]
17. ಅವರು ಹಿಗ್ಗುವ ಬಲವು ನೀನೇ. [QBR] ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು [* ಕೊಂಬು ಅಂದರೆ ಬಲ.] ಎತ್ತಲ್ಪಟ್ಟಿರುವುದು. [QBR]
18. ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; [QBR] ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು. [QBR]
19. ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, [QBR] “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; [QBR] ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ. [QBR]
20. ನನ್ನ ಸೇವಕನಾದ ದಾವೀದನನ್ನು ಕಂಡು, [QBR] ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ. [QBR]
21. ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; [QBR] ನನ್ನ ಭುಜವು ಅವನನ್ನು ಬಲಪಡಿಸುವುದು. [QBR]
22. ವೈರಿಯ ಕುತಂತ್ರವು ಅವನಲ್ಲಿ ಸಾಗದು; [QBR] ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು. [QBR]
23. ಅವನ ವಿರೋಧಿಗಳನ್ನು ಅವನ ಮುಂದೆಯೇ ಜಜ್ಜಿ ಹಾಕುವೆನು; [QBR] ಅವನ ದ್ವೇಷಿಗಳನ್ನು ಹತಮಾಡಿಬಿಡುವೆನು. [QBR]
24. ಆದರೆ ನನ್ನ ಪ್ರೀತಿ ಮತ್ತು ಸತ್ಯತೆಗಳು ಅವನೊಡನೆ ಇರುವವು; [QBR] ನನ್ನ ಹೆಸರಿನಿಂದ ಅವನ ಕೊಂಬು ಎತ್ತಲ್ಪಡುವುದು. [QBR]
25. ಸಮುದ್ರದಿಂದ ನದಿಗಳವರೆಗೂ ಅವನ ಹಸ್ತಕ್ಕೆ ಅಧಿಕಾರವನ್ನು ಕೊಡುವೆನು. [QBR]
26. ಅವನು ನನಗೆ, ‘ನನ್ನ ತಂದೆಯೂ, ದೇವರೂ, [QBR] ಆಶ್ರಯದುರ್ಗವೂ ನೀನೇ’ ಎಂದು ಹೇಳುವನು. [QBR]
27. ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನಾಗಿಯೂ, [QBR] ಭೂರಾಜರಲ್ಲಿ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು. [QBR]
28. ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; [QBR] ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು. [QBR]
29. ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. [QBR] ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು. [QBR]
30. ಅವನ ಸಂತಾನದವರು ನನ್ನ ಧರ್ಮಶಾಸ್ತ್ರವನ್ನು ಬಿಟ್ಟು, [QBR] ನನ್ನ ಆಜ್ಞೆಗಳಲ್ಲಿ ನಡೆಯದೆ, [QBR]
31. ನನ್ನ ವಿಧಿಗಳನ್ನು ಮೀರಿ, ನನ್ನ ನೇಮಗಳನ್ನು ಪಾಲಿಸದೆ ಹೋದರೆ, [QBR]
32. ಆಗ ನಾನು ಅವರ ದ್ರೋಹಕ್ಕಾಗಿ ಅವರನ್ನು ಬೆತ್ತದಿಂದ ಹೊಡೆಯುವೆನು; [QBR] ಅವರ ಅಪರಾಧಕ್ಕಾಗಿ ಪೆಟ್ಟುಕೊಡುವೆನು. [QBR]
33. ಆದರೂ ನಾನು ಅವನಲ್ಲಿಟ್ಟಿರುವ ಕೃಪೆಯನ್ನು ತಪ್ಪಿಸುವುದಿಲ್ಲ; [QBR] ನನ್ನ ನಂಬಿಗಸ್ತಿಕೆಯಿಂದ ಜಾರುವುದಿಲ್ಲ. [QBR]
34. ನನ್ನ ಒಡಂಬಡಿಕೆಯನ್ನು ಭಂಗಪಡಿಸುವುದಿಲ್ಲ; [QBR] ನನ್ನ ಮಾತನ್ನು ಬದಲಿಸುವುದಿಲ್ಲ. [QBR]
35. ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; [QBR] ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ. [QBR]
36. ಅದೇನೆಂದರೆ, ಅವನ ಸಂತತಿಯು ಶಾಶ್ವತವಾಗಿ ಇರುವುದು; [QBR] ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು, [QBR]
37. ಚಂದ್ರನಂತೆ ನಿತ್ಯಕ್ಕೂ ಸ್ಥಿರವಾಗಿರುವುದು. [QBR] ಪರಲೋಕದ ಸಾಕ್ಷಿ ಸತ್ಯವೇ ಸರಿ.” ಸೆಲಾ.
38. ಹೀಗೆ ಹೇಳಿದ ನೀನು ನಿನ್ನ ಅಭಿಷಿಕ್ತನ ಮೇಲೆ ಕೋಪಗೊಂಡವನಾಗಿ, [QBR] ಅವನನ್ನು ಅಸಹ್ಯಿಸಿ ತಳ್ಳಿಬಿಟ್ಟಿದ್ದೀ. [QBR]
39. ನೀನು ನಿನ್ನ ಸೇವಕನ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿ, [QBR] ಅವನ ಕಿರೀಟವನ್ನು ನೆಲಕ್ಕೆ ಹಾಕಿ ಅಪವಿತ್ರಮಾಡಿದ್ದೀ. [QBR]
40. ಅವನ ದೇಶದ ಮೇರೆಗಳನ್ನು ಕೆಡವಿ, ಕೋಟೆಗಳನ್ನು ಹಾಳುಮಾಡಿದ್ದೀ. [QBR]
41. ದಾರಿಗರೆಲ್ಲರೂ ಅವನನ್ನು ಸುಲಿಗೆ ಮಾಡುತ್ತಾರೆ; [QBR] ಅವನು ನೆರೆಹೊರೆಯವರ ಪರಿಹಾಸ್ಯಕ್ಕೆ ಗುರಿಯಾಗಿದ್ದಾನೆ. [QBR]
42. ಅವನ ವಿರೋಧಿಗಳ ಹಸ್ತವನ್ನು ಉನ್ನತಪಡಿಸಿದ್ದೀ; [QBR] ಅವನ ವೈರಿಗಳಿಗೆಲ್ಲಾ ಆನಂದವಾಗುವಂತೆ ಮಾಡಿದ್ದೀ. [QBR]
43. ಇದಲ್ಲದೆ ಅವನ ಕತ್ತಿಯನ್ನು ತಿರುಗಿಸಿಬಿಟ್ಟಿದ್ದೀ; [QBR] ಅವನನ್ನು ಯುದ್ಧದಲ್ಲಿ ನಿಲ್ಲದಂತೆ ಮಾಡಿದ್ದೀ. [QBR]
44. ಅವನ ವೈಭವವನ್ನು [† ವೈಭವವನ್ನು ಅಂದರೆ ರಾಜದಂಡ.] ತಡೆದುಬಿಟ್ಟಿದ್ದೀ; [QBR] ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ. [QBR]
45. ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, [QBR] ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ
46. ಯೆಹೋವನೇ, ಇನ್ನೆಷ್ಟರವರೆಗೆ ಮರೆಯಾಗಿರುವಿ? [QBR] ನಿನ್ನ ಕೋಪಾಗ್ನಿಯು ನಮ್ಮ ಮೇಲೆ ಸದಾ ಉರಿಯುತ್ತಿರಬೇಕೋ? [QBR]
47. ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ, [QBR] ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ. [QBR]
48. ತಮ್ಮನ್ನು ಪಾತಾಳಕ್ಕೆ ತಪ್ಪಿಸಿಕೊಂಡು, ಮರಣಹೊಂದದೆ [QBR] ಚಿರಂಜೀವಿಯಾಗಿರುವವರು ಯಾರು? ಸೆಲಾ
49. ಕರ್ತನೇ, ನೀನು ನಿನ್ನ ಸತ್ಯತೆಯಲ್ಲಿ ಆಣೆಯಿಟ್ಟು, [QBR] ದಾವೀದನಿಗೆ ವಾಗ್ದಾನಮಾಡಿ ನಡೆಸುತ್ತಿದ್ದ ಹಿಂದಿನ ಕೃಪಾಕಾರ್ಯಗಳು ಎಲ್ಲಿ? [QBR]
50. ಯೆಹೋವನೇ, ನಿನ್ನ ವೈರಿಗಳು ನಿಂದಿಸುತ್ತಾರೆ; [QBR] ನಿನ್ನ ಅಭಿಷಿಕ್ತನನ್ನು ಹೆಜ್ಜೆ ಹೆಜ್ಜೆಗೂ ಅಪಮಾನ ಮಾಡುತ್ತಾರೆ. [QBR]
51. ಕರ್ತನೇ, ನಿನ್ನ ಸೇವಕರಿಗಾಗುವ ಅಪವಾದವನ್ನೂ, [QBR] ನಾನು ಎಲ್ಲಾ ಜನಾಂಗಗಳ ನಿಂದಾಭಾರವನ್ನು ಉಡಿಲಲ್ಲಿ ಕಟ್ಟಿರುವುದನ್ನೂ ಜ್ಞಾಪಿಸಿಕೋ. [QBR]
52. ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್. [PE]