ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QBR] ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. [QBR]
2. ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; [QBR] ನಿನ್ನ ಹೆಸರನ್ನು ಕೀರ್ತಿಸುವೆನು. [QBR]
3. ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. [QBR]
4. ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; [QBR] ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. [QBR]
5. ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, [QBR] ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. [QBR]
6. ಶತ್ರುಗಳು ನಿಶ್ಶೇಷವಾದರು; [QBR] ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. [QBR] ಅವರ ಸ್ಮರಣೆಯೇ ಇಲ್ಲವಾಯಿತು. [QBR]
7. ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, [QBR] ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. [QBR]
8. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; [QBR] ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. [QBR]
9. ಯೆಹೋವನು ಕುಗ್ಗಿದವರಿಗೆ ಆಶ್ರಯವೂ, [QBR] ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. [QBR]
10. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು [QBR] ನಿನ್ನಲ್ಲಿ ಭರವಸವಿಡುವರು; [QBR] ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. [QBR]
11. ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; [QBR] ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QBR]
12. ಆತನು ಕುಗ್ಗಿದವರ ಮೊರೆಯನ್ನು ಮರೆಯದೆ [QBR] ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. [QBR]
13. ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; [QBR] ನನ್ನನ್ನು ಉದ್ಧರಿಸುವವನೇ, ಕನಿಕರಿಸು; [QBR] ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. [QBR]
14. ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; [QBR] ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. [QBR]
15. ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; [QBR] ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. [QBR]
16. ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; [QBR] ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
17. ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ [QBR] ಪಾತಾಳಕ್ಕೆ ಇಳಿದುಹೋಗುವರು. [QBR]
18. ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; [QBR] ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. [QBR]
19. ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. [QBR] ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. [QBR]
20. ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; [QBR] ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 150
ಕೀರ್ತನೆಗಳು 9:125
1 ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. 9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. 14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ 17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. 18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. 20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 150
Common Bible Languages
West Indian Languages
×

Alert

×

kannada Letters Keypad References