ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. *[PE][QS]ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QE][QS]ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. [QE]
2. [QS]ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; [QE][QS]ನಿನ್ನ ಹೆಸರನ್ನು ಕೀರ್ತಿಸುವೆನು. [QE]
3. [QS]ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. [QE]
4. [QS]ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; [QE][QS]ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. [QE]
5. [QS]ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, [QE][QS]ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. [QE]
6. [QS]ಶತ್ರುಗಳು ನಿಶ್ಶೇಷವಾದರು; [QE][QS]ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. [QE][QS]ಅವರ ಸ್ಮರಣೆಯೇ ಇಲ್ಲವಾಯಿತು. [QE]
7. [QS]ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, [QE][QS]ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. [QE]
8. [QS]ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; [QE][QS]ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. [QE]
9. [QS]ಯೆಹೋವನು ಕುಗ್ಗಿದವರಿಗೆ ಆಶ್ರಯವೂ, [QE][QS]ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. [QE]
10. [QS]ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು [QE][QS]ನಿನ್ನಲ್ಲಿ ಭರವಸವಿಡುವರು; [QE][QS]ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. [QE]
11. [QS]ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; [QE][QS]ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QE]
12. [QS]ಆತನು ಕುಗ್ಗಿದವರ ಮೊರೆಯನ್ನು ಮರೆಯದೆ [QE][QS]ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. [QE]
13. [QS]ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; [QE][QS]ನನ್ನನ್ನು ಉದ್ಧರಿಸುವವನೇ, ಕನಿಕರಿಸು; [QE][QS]ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. [QE]
14. [QS]ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; [QE][QS]ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. [QE]
15. [QS]ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; [QE][QS]ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. [QE]
16. [QS]ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; [QE][QS]ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ [QE][QSS]ಸೆಲಾ [QSE]
17. [QS]ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ [QE][QS]ಪಾತಾಳಕ್ಕೆ ಇಳಿದುಹೋಗುವರು. [QE]
18. [QS]ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; [QE][QS]ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. [QE]
19. [QS]ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. [QE][QS]ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. [QE]
20. [QS]ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; [QE][QS]ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. [QE][QSS]ಸೆಲಾ. [QSE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 150
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ. *ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. 2 ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು. 3 ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. 4 ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. 5 ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. 6 ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು. 7 ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. 8 ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. 9 ಯೆಹೋವನು ಕುಗ್ಗಿದವರಿಗೆ ಆಶ್ರಯವೂ, ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. 10 ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. 11 ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. 12 ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. 13 ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. 14 ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. 15 ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. 16 ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ QSS ಸೆಲಾ SE 17 ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು. 18 ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. 19 ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. 20 ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. QSS ಸೆಲಾ. SE
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 9 / 150
×

Alert

×

Kannada Letters Keypad References