ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; [QBR] ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. [QBR]
2. ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; [QBR] ನಿನ್ನ ಹೆಸರನ್ನು ಕೀರ್ತಿಸುವೆನು. [QBR]
3. ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ. [QBR]
4. ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ; [QBR] ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ. [QBR]
5. ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, [QBR] ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ. [QBR]
6. ಶತ್ರುಗಳು ನಿಶ್ಶೇಷವಾದರು; [QBR] ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. [QBR] ಅವರ ಸ್ಮರಣೆಯೇ ಇಲ್ಲವಾಯಿತು. [QBR]
7. ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು, [QBR] ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ. [QBR]
8. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು; [QBR] ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು. [QBR]
9. ಯೆಹೋವನು ಕುಗ್ಗಿದವರಿಗೆ ಆಶ್ರಯವೂ, [QBR] ಆಪತ್ಕಾಲದಲ್ಲಿ ದುರ್ಗವೂ ಆಗಿರುವನು. [QBR]
10. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು [QBR] ನಿನ್ನಲ್ಲಿ ಭರವಸವಿಡುವರು; [QBR] ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ. [QBR]
11. ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ; [QBR] ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QBR]
12. ಆತನು ಕುಗ್ಗಿದವರ ಮೊರೆಯನ್ನು ಮರೆಯದೆ [QBR] ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು. [QBR]
13. ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; [QBR] ನನ್ನನ್ನು ಉದ್ಧರಿಸುವವನೇ, ಕನಿಕರಿಸು; [QBR] ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ. [QBR]
14. ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; [QBR] ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು. [QBR]
15. ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; [QBR] ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು. [QBR]
16. ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; [QBR] ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
17. ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ [QBR] ಪಾತಾಳಕ್ಕೆ ಇಳಿದುಹೋಗುವರು. [QBR]
18. ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; [QBR] ದೀನರ ನಿರೀಕ್ಷೆಯು ಕೆಡುವುದೇ ಇಲ್ಲ. [QBR]
19. ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. [QBR] ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ. [QBR]
20. ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; [QBR] ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. [PE]

Notes

No Verse Added

Total 150 Chapters, Current Chapter 9 of Total Chapters 150
ಕೀರ್ತನೆಗಳು 9:4
1. ಯೆಹೋವನೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು;
ನೀನು ಮಾಡಿದ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು.
2. ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು;
ನಿನ್ನ ಹೆಸರನ್ನು ಕೀರ್ತಿಸುವೆನು.
3. ನನ್ನ ಹಗೆಗಳು ನಿನ್ನ ಎದುರಿನಿಂದ ಹಿಂದಿರುಗಿ ಎಡವಿಬಿದ್ದು ಹಾಳಾದರಲ್ಲಾ.
4. ನನ್ನ ವ್ಯಾಜ್ಯದಲ್ಲಿ ನೀನು ನ್ಯಾಯವನ್ನು ಸ್ಥಾಪಿಸಿದಿ;
ನೀನು ಆಸನಾರೂಢನಾಗಿ ನೀತಿಯಿಂದ ನ್ಯಾಯವನ್ನು ನಿರ್ಣಯಿಸುತ್ತಿ.
5. ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ,
ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.
6. ಶತ್ರುಗಳು ನಿಶ್ಶೇಷವಾದರು;
ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು.
ಅವರ ಸ್ಮರಣೆಯೇ ಇಲ್ಲವಾಯಿತು.
7. ಯೆಹೋವನಾದರೋ ಯಾವಾಗಲೂ ನೆಲೆಗೊಂಡಿದ್ದು,
ನ್ಯಾಯವಿಚಾರಿಸುವುದಕ್ಕಾಗಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ.
8. ಆತನೇ ನೀತಿಗನುಸಾರವಾಗಿ ಲೋಕಕ್ಕೆ ನ್ಯಾಯ ತೀರಿಸುವವನು;
ಆತನು ಜನಾಂಗಗಳಿಗೆ ಸತ್ಯಕ್ಕನುಸಾರವಾಗಿ ತೀರ್ಪುಕೊಡುವನು.
9. ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
10. ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
11. ಚೀಯೋನಿನಲ್ಲಿ ವಾಸಿಸುವ ಯೆಹೋವನನ್ನು ಕೀರ್ತಿಸಿರಿ;
ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ.
12. ಆತನು ಕುಗ್ಗಿದವರ ಮೊರೆಯನ್ನು ಮರೆಯದೆ
ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
13. ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ;
ನನ್ನನ್ನು ಉದ್ಧರಿಸುವವನೇ, ಕನಿಕರಿಸು;
ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
14. ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು;
ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.
15. ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು;
ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.
16. ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ;
ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
17. ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ
ಪಾತಾಳಕ್ಕೆ ಇಳಿದುಹೋಗುವರು.
18. ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ;
ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.
19. ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.
ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.
20. ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು;
ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ. PE
Total 150 Chapters, Current Chapter 9 of Total Chapters 150
×

Alert

×

kannada Letters Keypad References