3. {#3ಚತುರ್ಥ ಭಾಗ (90-106) }{#1ಪಾಪಾತ್ಮರಿಗೆ ದೇವರ ದಯವೇ ಆಶ್ರಯ }[PS]*ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ. [BR]ಧರ್ಮೋ 32 *[PE][QS]ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ. [QE]
2. [QS]ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, [QE][QS]ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, [QE][QS]ಯುಗಯುಗಾಂತರಗಳಲ್ಲಿಯೂ ನೀನೇ ದೇವರು. [QE]
3. [QS]“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, [QE][QS]ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ. [QE]
4. [QS]ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ [QE][QS]ಗತಿಸಿಹೋದ ನಿನ್ನೆಯ ದಿನದಂತೆಯೂ, [QE][QS]ರಾತ್ರಿಯ ಜಾವದಂತೆಯೂ ಇವೆ. [QE]
5. [QS]ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; [QE][QS]ಅವರು ನಿದ್ರೆಗೆ ಸಮಾನರೇ. [QE][QS]ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ. [QE]
6. [QS]ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; [QE][QS]ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ. [QE]
7. [QS]ನಿನ್ನ ಕೋಪದಿಂದ ನಾವು ಇಲ್ಲವಾದೆವು; [QE][QS]ನಿನ್ನ ರೌದ್ರದಿಂದ ತಲ್ಲಣಗೊಂಡೆವು. [QE]
8. [QS]ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, [QE][QS]ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ. [QE]
9. [QS]ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; [QE][QS]ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು. [QE]
10. [QS]ನಮ್ಮ ಆಯುಷ್ಕಾಲವು[* ಆಯುಷ್ಕಾಲವು ಅಥವಾ ಪ್ರತಾಪ. ] ಎಪ್ಪತ್ತು ವರ್ಷ, [QE][QS]ಬಲ ಹೆಚ್ಚಿದರೆ ಎಂಭತ್ತು; [QE][QS]ಕಷ್ಟಸಂಕಟಗಳೇ ಅದರ ಆಡಂಬರ. [QE][QS]ಅದು ಬೇಗನೆ ಗತಿಸಿಹೋಗುತ್ತದೆ; [QE][QS]ನಾವು ಹಾರಿ ಹೋಗುತ್ತೇವೆ. [QE]
11. [QS]ನಿನ್ನ ಕೋಪದ ಬಲವನ್ನೂ, [QE][QS]ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು? [QE]
12. [QS]ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; [QE][QS]ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು. [QE]
13. [QS]ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; [QE][QS]ಎಷ್ಟರವರೆಗೆ ಕೋಪ ಮಾಡುವಿ? [QE][QS]ನಿನ್ನ ಸೇವಕರ ಮೇಲೆ ಕರುಣೆಯಿರಲಿ. [QE]
14. [QS]ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; [QE][QS]ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು. [QE]
15. [QS]ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, [QE][QS]ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು. [QE]
16. [QS]ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, [QE][QS]ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ. [QE]
17. [QS]ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. [QE][QS]ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; [QE][QS]ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು. [QE]