1. {#3ದೇವಾಶ್ರಿತನು ಸುರಕ್ಷಿತನು [BR]ವಿಮೋ 23:20-26 } [QS]ಅತ್ಯುನ್ನತನಾದ ದೇವರ ಮೊರೆಹೊಕ್ಕವನು, [QE][QS]ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು. [QE]
2. [QS]ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, [QE][QS]ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು. [QE]
3. [QS]ನನ್ನನ್ನು ಬೇಟೆಗಾರನ ಬಲೆಯಿಂದಲೂ, [QE][QS]ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ. [QE]
4. [QS]ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; [QE][QS]ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. [QE][QS]ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ. [QE]
5. [QS]ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, [QE][QS]ಹಗಲಲ್ಲಿ ಹಾರಿಬರುವ ಬಾಣಕ್ಕೂ, [QE]
6. [QS]ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, [QE][QS]ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ. [QE]
7. [QS]ನಿನ್ನ ಮಗ್ಗುಲಲ್ಲಿ ಸಾವಿರ ಜನರು, [QE][QS]ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು. [QE]
8. [QS]ನೀನು ಅದನ್ನು ಕಣ್ಣಾರೆ ಕಂಡು, [QE][QS]ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ. [QE]
9. [QS]ಯೆಹೋವನೇ ನನ್ನ ಶರಣನು! [QE][QS]ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ. [QE]
10. [QS]ಯಾವ ಕೇಡೂ ನಿನಗೆ ಸಂಭವಿಸದು; [QE][QS]ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು. [QE]
11. [QS]ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ [QE][QS]ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು. [QE]
12. [QS]ನಿನ್ನ ಕಾಲು ಕಲ್ಲಿಗೆ ತಗಲದಂತೆ, [QE][QS]ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು. [QE]
13. [QS]ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; [QE][QS]ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ. [QE]
14. [QS]ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; [QE][QS]ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು. [QE]
15. [QS]ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; [QE][QS]ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು; [QE]
16. [QS]ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; [QE][QS]ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು. [QE]