ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, [QBR] ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. [QBR]
2. ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, [QBR]
3. ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, [QBR] ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. [QBR]
4. ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; [QBR] ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. [QBR]
5. ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; [QBR] ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. [QBR]
6. ಪಶುಪ್ರಾಯನು ಅರಿಯನು; [QBR] ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. [QBR]
7. ದುಷ್ಟರು ಹುಲ್ಲಿನಂತೆ ಬೆಳೆಯುವುದೂ, [QBR] ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. [QBR]
8. ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. [QBR]
9. ಯೆಹೋವನೇ, ಇಗೋ ನಿನ್ನ ಶತ್ರುಗಳು! [QBR] ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. [QBR]
10. ಆದರೆ ನನ್ನ ಕೊಂಬನ್ನು [* ಕೊಂಬನ್ನು ಅಥವಾ ಬಲ.] ಕಾಡುಕೋಣದ ಕೊಂಬಿನಂತೆ [† ಕೊಂಬಿನಂತೆ ಅಥವಾ ಬಲ.] ಎತ್ತಿದ್ದಿ; [QBR] [‡ ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ.] ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. [QBR]
11. ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; [QBR] ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. [QBR]
12. ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; [QBR] ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. [QBR]
13. ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, [QBR] ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. [QBR]
14. ಮುಪ್ಪಿನಲ್ಲಿಯೂ ಫಲಿಸುವರು; [QBR] ಪುಷ್ಟಿಯಾಗಿದ್ದು ಶೋಭಿಸುವರು. [QBR]
15. ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. [QBR] ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. [PE]

Notes

No Verse Added

Total 150 Chapters, Current Chapter 92 of Total Chapters 150
ಕೀರ್ತನೆಗಳು 92:107
1. ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
2. ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3. ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,
ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4. ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ;
ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5. ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ;
ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6. ಪಶುಪ್ರಾಯನು ಅರಿಯನು;
ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7. ದುಷ್ಟರು ಹುಲ್ಲಿನಂತೆ ಬೆಳೆಯುವುದೂ,
ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8. ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9. ಯೆಹೋವನೇ, ಇಗೋ ನಿನ್ನ ಶತ್ರುಗಳು!
ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10. ಆದರೆ ನನ್ನ ಕೊಂಬನ್ನು * ಕೊಂಬನ್ನು ಅಥವಾ ಬಲ. ಕಾಡುಕೋಣದ ಕೊಂಬಿನಂತೆ ಕೊಂಬಿನಂತೆ ಅಥವಾ ಬಲ. ಎತ್ತಿದ್ದಿ;
ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ. ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11. ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ;
ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
12. ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು;
ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
13. ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು,
ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
14. ಮುಪ್ಪಿನಲ್ಲಿಯೂ ಫಲಿಸುವರು;
ಪುಷ್ಟಿಯಾಗಿದ್ದು ಶೋಭಿಸುವರು.
15. ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.
ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. PE
Total 150 Chapters, Current Chapter 92 of Total Chapters 150
×

Alert

×

kannada Letters Keypad References