ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವರ ನೀತಿಸಾಧನೆಗಳನ್ನು ಹೊಗಳುವುದು }[PS]*ಕೀರ್ತನೆ; ಸಬ್ಬತ್ ದಿನದ ಗೀತೆ. *[PE][QS]ಯೆಹೋವನೇ, ನಿನ್ನನ್ನು ಕೊಂಡಾಡುವುದೂ, [QE][QS]ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. [QE]
2. [QS]ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, [QE]
3. [QS]ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, [QE][QS]ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. [QE]
4. [QS]ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; [QE][QS]ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. [QE]
5. [QS]ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; [QE][QS]ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. [QE]
6. [QS]ಪಶುಪ್ರಾಯನು ಅರಿಯನು; [QE][QS]ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. [QE]
7. [QS]ದುಷ್ಟರು ಹುಲ್ಲಿನಂತೆ ಬೆಳೆಯುವುದೂ, [QE][QS]ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. [QE]
8. [QS]ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. [QE]
9. [QS]ಯೆಹೋವನೇ, ಇಗೋ ನಿನ್ನ ಶತ್ರುಗಳು! [QE][QS]ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. [QE]
10. [QS]ಆದರೆ ನನ್ನ ಕೊಂಬನ್ನು[* ಕೊಂಬನ್ನು ಅಥವಾ ಬಲ. ] ಕಾಡುಕೋಣದ ಕೊಂಬಿನಂತೆ [† ಕೊಂಬಿನಂತೆ ಅಥವಾ ಬಲ. ] ಎತ್ತಿದ್ದಿ; [QE][QS] [‡ ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ. ]ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. [QE]
11. [QS]ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; [QE][QS]ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. [QE]
12. [QS]ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; [QE][QS]ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. [QE]
13. [QS]ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, [QE][QS]ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. [QE]
14. [QS]ಮುಪ್ಪಿನಲ್ಲಿಯೂ ಫಲಿಸುವರು; [QE][QS]ಪುಷ್ಟಿಯಾಗಿದ್ದು ಶೋಭಿಸುವರು. [QE]
15. [QS]ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. [QE][QS]ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
ದೇವರ ನೀತಿಸಾಧನೆಗಳನ್ನು ಹೊಗಳುವುದು 3 *ಕೀರ್ತನೆ; ಸಬ್ಬತ್ ದಿನದ ಗೀತೆ. *ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. 4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. 5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. 6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. 7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. 8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. 9 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. 10 ಆದರೆ ನನ್ನ ಕೊಂಬನ್ನು* ಕೊಂಬನ್ನು ಅಥವಾ ಬಲ. ಕಾಡುಕೋಣದ ಕೊಂಬಿನಂತೆ † ಕೊಂಬಿನಂತೆ ಅಥವಾ ಬಲ. ಎತ್ತಿದ್ದಿ; ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ. ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. 11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. 12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 14 ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
×

Alert

×

Kannada Letters Keypad References