ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, [QBR] ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. [QBR]
2. ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, [QBR]
3. ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, [QBR] ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. [QBR]
4. ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; [QBR] ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. [QBR]
5. ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; [QBR] ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. [QBR]
6. ಪಶುಪ್ರಾಯನು ಅರಿಯನು; [QBR] ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. [QBR]
7. ದುಷ್ಟರು ಹುಲ್ಲಿನಂತೆ ಬೆಳೆಯುವುದೂ, [QBR] ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. [QBR]
8. ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. [QBR]
9. ಯೆಹೋವನೇ, ಇಗೋ ನಿನ್ನ ಶತ್ರುಗಳು! [QBR] ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. [QBR]
10. ಆದರೆ ನನ್ನ ಕೊಂಬನ್ನು [* ಕೊಂಬನ್ನು ಅಥವಾ ಬಲ.] ಕಾಡುಕೋಣದ ಕೊಂಬಿನಂತೆ [† ಕೊಂಬಿನಂತೆ ಅಥವಾ ಬಲ.] ಎತ್ತಿದ್ದಿ; [QBR] [‡ ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ.] ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. [QBR]
11. ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; [QBR] ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. [QBR]
12. ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; [QBR] ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. [QBR]
13. ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, [QBR] ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. [QBR]
14. ಮುಪ್ಪಿನಲ್ಲಿಯೂ ಫಲಿಸುವರು; [QBR] ಪುಷ್ಟಿಯಾಗಿದ್ದು ಶೋಭಿಸುವರು. [QBR]
15. ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. [QBR] ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
ಕೀರ್ತನೆಗಳು 92:94
1 ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ. 2 ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ, 3 ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ. 4 ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ. 5 ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ. 6 ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು. 7 ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ. 8 ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ. 9 ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು. 10 ಆದರೆ ನನ್ನ ಕೊಂಬನ್ನು * ಕೊಂಬನ್ನು ಅಥವಾ ಬಲ. ಕಾಡುಕೋಣದ ಕೊಂಬಿನಂತೆ † ಕೊಂಬಿನಂತೆ ಅಥವಾ ಬಲ. ಎತ್ತಿದ್ದಿ; ಅಥವಾ ನೀನು ನನ್ನನ್ನು ಸಂತೋಷವುಳ್ಳವನಾಗಿರುವಂತೆ ಆಶೀರ್ವದಿಸಿದ್ದೀ. ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ. 11 ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ. 12 ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು. 13 ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು. 14 ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು. 15 ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 92 / 150
Common Bible Languages
West Indian Languages
×

Alert

×

kannada Letters Keypad References