1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, [QBR] ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; [QBR] ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. [QBR]
2. ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; [QBR] ಯುಗಯುಗಾಂತರದಿಂದಲೂ ನೀನು ಇರುವಿ. [QBR]
3. ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; [QBR] ನದಿಗಳು ಘೋಷಿಸುತ್ತವೆ. [QBR]
4. ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, [QBR] ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. [QBR]
5. ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; [QBR] ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. [PE]