1. {#3ದೇವರ ಶಿಕ್ಷೆ ಮತ್ತು ರಕ್ಷಣೆಗೆ ಒಳಗಾದವನು ಧನ್ಯನು } [QS]ಯೆಹೋವನೇ, ಮುಯ್ಯಿತೀರಿಸುವ ದೇವರೇ, [QE][QS]ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.[* ಕೋಪವನ್ನು ತೋರ್ಪಡಿಸು. ಅಥವಾ ಪ್ರಕಾಶಿಸು. ] [QE]
2. [QS]ಲೋಕದ ನ್ಯಾಯಾಧಿಪತಿಯೇ, ಏಳು; [QE][QS]ಗರ್ವಿಷ್ಠರಿಗೆ ತಕ್ಕ ಶಿಕ್ಷೆಯನ್ನು ಕೊಡು. [QE]
3. [QS]ಯೆಹೋವನೇ, ದುಷ್ಟರು ಎಲ್ಲಿಯವರೆಗೆ, [QE][QS]ದುಷ್ಟರು ಎಲ್ಲಿಯವರೆಗೆ ಹಿಗ್ಗುತ್ತಿರಬೇಕು? [QE]
4. [QS]ಕೆಡುಕರೆಲ್ಲರು ಉಬ್ಬಿಕೊಂಡು, [QE][QS]ಅಹಂಕಾರವನ್ನು ಕಕ್ಕುತ್ತಾರೆ. [QE]
5. [QS]ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; [QE][QS]ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ; [QE]
6. [QS]ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; [QE][QS]ಅನಾಥರನ್ನು ಹತಮಾಡುತ್ತಾರೆ. [QE]
7. [QS]ಅವರು, “ಯಾಹುವು ನೋಡುವುದೇ ಇಲ್ಲ; [QE][QS]ಯಾಕೋಬ್ಯರ ದೇವರು ಲಕ್ಷಿಸುವುದೇ ಇಲ್ಲ” ಅನ್ನುತ್ತಾರೆ. [QE]
8. [QS]ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; [QE][QS]ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ? [QE]
9. [QS]ಕಿವಿಮಾಡಿದವನು ಕೇಳನೋ? [QE][QS]ಕಣ್ಣುಕೊಟ್ಟವನು ನೋಡನೋ? [QE]
10. [QS]ಜನಾಂಗಗಳನ್ನು ಶಿಕ್ಷಿಸುವವನೂ, [QE][QS]ಮನುಷ್ಯರಿಗೆ ಬುದ್ಧಿಕಲಿಸುವವನೂ ಗದರಿಸನೋ? [QE]
11. [QS]ಮನುಷ್ಯನ ಯೋಚನೆಗಳು, “ಉಸಿರೇ” ಎಂದು ಯೆಹೋವನು ತಿಳುಕೊಳ್ಳುತ್ತಾನೆ. [QE]
12. [QS]ಯಾಹುವೇ, ನೀನು ಯಾರನ್ನು ಶಿಕ್ಷಿಸಿ, [QE][QS]ಧರ್ಮೋಪದೇಶಮಾಡುತ್ತೀಯೋ ಅವನೇ ಧನ್ಯನು. [QE]
13. [QS]ಅಂಥವನನ್ನು, ದುಷ್ಟನಿಗೋಸ್ಕರ ಗುಂಡಿಯು ಅಗೆಯಲ್ಪಡುವ ತನಕ, [QE][QS]ಆಪತ್ತಿನಲ್ಲಿಯೂ ನೀನು ಸಂರಕ್ಷಿಸುತ್ತಿ. [QE]
14. [QS]ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವುದಿಲ್ಲ; [QE][QS]ತನ್ನ ಸ್ವತ್ತನ್ನು ಕೈಬಿಡುವುದಿಲ್ಲ. [QE]
15. [QS]ನ್ಯಾಯತೀರ್ಪು ನೀತಿಗೆ ತಿರುಗಿಕೊಳ್ಳುವುದು; [QE][QS]ಯಥಾರ್ಥಚಿತ್ತರೆಲ್ಲರೂ ಅದನ್ನೇ ಅನುಸರಿಸುವರು. [QE]
16. [QS]ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? [QE][QS]ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು? [QE]
17. [QS]ಯೆಹೋವನ ಸಹಾಯವಿಲ್ಲದಿದ್ದರೆ ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. [QE]
18. [QS]ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ, [QE][QS]ನಿನ್ನ ಕೃಪೆಯು ನನಗೆ ಆಧಾರವಾಯಿತು. [QE]
19. [QS]ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ, [QE][QS]ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. [QE]
20. [QS]ಧರ್ಮಶಾಸ್ತ್ರದ ನೆಪದಿಂದ ಕೇಡುಕಲ್ಪಿಸುವ ದುಷ್ಟ ಅಧಿಪತಿಗಳಿಗೂ, [QE][QS]ನಿನಗೂ ಸಂಬಂಧವೇನು? [QE]
21. [QS]ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; [QE][QS]ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ. [QE]
22. [QS]ಆದರೆ ಯೆಹೋವನು ನನ್ನ ದುರ್ಗವೂ, [QE][QS]ನನ್ನ ದೇವರು ಆಶ್ರಯಗಿರಿಯೂ ಆಗಿದ್ದಾನೆ. [QE]
23. [QS]ಅವರ ಕೆಟ್ಟತನವನ್ನು ಅವರಿಗೇ ತಿರುಗಿಸುವನು; [QE][QS]ಅವರ ದುಷ್ಟತನದಿಂದಲೇ ಅವರನ್ನು ನಿರ್ಮೂಲಮಾಡುವನು. [QE][QS]ನಮ್ಮ ಯೆಹೋವ ದೇವರು ಅವರನ್ನು ಸಂಹರಿಸಿಬಿಡುವನು. [QE]