ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; [QBR] ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. [QBR]
2. ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; [QBR] ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. [QBR]
3. ಯೆಹೋವನು ಮಹಾದೇವರೂ, [QBR] ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. [QBR]
4. ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; [QBR] ಪರ್ವತಶಿಖರಗಳು ಆತನವೇ. [QBR]
5. ಆತನೇ ಸಮುದ್ರವನ್ನು ನಿರ್ಮಿಸಿದವನು; [QBR] ಅದು ಆತನದೇ, ಒಣನೆಲವು ಆತನ ಕೈಕೆಲಸವೇ. [QBR]
6. ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ [QBR] ಸಾಷ್ಟಾಂಗವೆರಗಿ ಆರಾಧಿಸೋಣ. [QBR]
7. ಆತನು ನಮ್ಮ ದೇವರು; [QBR] ನಾವೋ ಆತನು ಪಾಲಿಸುವ ಪ್ರಜೆಯೂ, [QBR] ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. [QBR] ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. [QBR]
8. ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ [* ಮೆರೀಬ ಅಂದರೆ ವಾಗ್ವಾದ.] , [QBR] ಮಸ್ಸಾದಲ್ಲಿ [† ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8.] ಮಾಡಿದ ದಿನದಂತೆ, [QBR] ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. [QBR]
9. ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; [QBR] ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. [QBR]
10. ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; [QBR] “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, [QBR] ನನ್ನ ಆಜ್ಞೆಗಳಿಗೆ ವಿಧೇಯರಾಗದವರು [‡ ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು.] ” ಎಂದು ಹೇಳಿದೆನು. [QBR]
11. ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು [QBR] ಕೋಪಗೊಂಡು ಪ್ರಮಾಣಮಾಡಿದೆನು. [PE]

Notes

No Verse Added

Total 150 Chapters, Current Chapter 95 of Total Chapters 150
ಕೀರ್ತನೆಗಳು 95:5
1. ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ;
ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.
2. ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
3. ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
4. ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ;
ಪರ್ವತಶಿಖರಗಳು ಆತನವೇ.
5. ಆತನೇ ಸಮುದ್ರವನ್ನು ನಿರ್ಮಿಸಿದವನು;
ಅದು ಆತನದೇ, ಒಣನೆಲವು ಆತನ ಕೈಕೆಲಸವೇ.
6. ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ
ಸಾಷ್ಟಾಂಗವೆರಗಿ ಆರಾಧಿಸೋಣ.
7. ಆತನು ನಮ್ಮ ದೇವರು;
ನಾವೋ ಆತನು ಪಾಲಿಸುವ ಪ್ರಜೆಯೂ,
ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ.
ನೀವು ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.
8. ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ * ಮೆರೀಬ ಅಂದರೆ ವಾಗ್ವಾದ. ,
ಮಸ್ಸಾದಲ್ಲಿ ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8. ಮಾಡಿದ ದಿನದಂತೆ,
ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.
9. ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು;
ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
10. ನಾನು ನಲ್ವತ್ತು ವರ್ಷ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು;
“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು,
ನನ್ನ ಆಜ್ಞೆಗಳಿಗೆ ವಿಧೇಯರಾಗದವರು ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ಎಂದು ಹೇಳಿದೆನು.
11. ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು
ಕೋಪಗೊಂಡು ಪ್ರಮಾಣಮಾಡಿದೆನು. PE
Total 150 Chapters, Current Chapter 95 of Total Chapters 150
×

Alert

×

kannada Letters Keypad References