ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; [QBR] ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. [QBR]
2. ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; [QBR] ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. [QBR]
3. ಯೆಹೋವನು ಮಹಾದೇವರೂ, [QBR] ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. [QBR]
4. ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; [QBR] ಪರ್ವತಶಿಖರಗಳು ಆತನವೇ. [QBR]
5. ಆತನೇ ಸಮುದ್ರವನ್ನು ನಿರ್ಮಿಸಿದವನು; [QBR] ಅದು ಆತನದೇ, ಒಣನೆಲವು ಆತನ ಕೈಕೆಲಸವೇ. [QBR]
6. ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ [QBR] ಸಾಷ್ಟಾಂಗವೆರಗಿ ಆರಾಧಿಸೋಣ. [QBR]
7. ಆತನು ನಮ್ಮ ದೇವರು; [QBR] ನಾವೋ ಆತನು ಪಾಲಿಸುವ ಪ್ರಜೆಯೂ, [QBR] ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. [QBR] ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. [QBR]
8. ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ [* ಮೆರೀಬ ಅಂದರೆ ವಾಗ್ವಾದ.] , [QBR] ಮಸ್ಸಾದಲ್ಲಿ [† ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8.] ಮಾಡಿದ ದಿನದಂತೆ, [QBR] ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. [QBR]
9. ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; [QBR] ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. [QBR]
10. ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; [QBR] “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, [QBR] ನನ್ನ ಆಜ್ಞೆಗಳಿಗೆ ವಿಧೇಯರಾಗದವರು [‡ ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು.] ” ಎಂದು ಹೇಳಿದೆನು. [QBR]
11. ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು [QBR] ಕೋಪಗೊಂಡು ಪ್ರಮಾಣಮಾಡಿದೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 95 / 150
ಕೀರ್ತನೆಗಳು 95:55
1 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. 2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. 3 ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. 4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ. 5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ. 6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. 7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. 8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ * ಮೆರೀಬ ಅಂದರೆ ವಾಗ್ವಾದ. , ಮಸ್ಸಾದಲ್ಲಿ ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8. ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. 9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. 10 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ” ಎಂದು ಹೇಳಿದೆನು. 11 ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 95 / 150
Common Bible Languages
West Indian Languages
×

Alert

×

kannada Letters Keypad References