ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ದೇವರನ್ನು ವಿಶ್ವಾಸದಿಂದ ಆರಾಧಿಸುವುದು [BR]ಕೀರ್ತ 81; 96-100 } [QS]ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; [QE][QS]ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. [QE]
2. [QS]ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; [QE][QS]ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. [QE]
3. [QS]ಯೆಹೋವನು ಮಹಾದೇವರೂ, [QE][QS]ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. [QE]
4. [QS]ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; [QE][QS]ಪರ್ವತಶಿಖರಗಳು ಆತನವೇ. [QE]
5. [QS]ಆತನೇ ಸಮುದ್ರವನ್ನು ನಿರ್ಮಿಸಿದವನು; [QE][QS]ಅದು ಆತನದೇ, ಒಣನೆಲವು ಆತನ ಕೈಕೆಲಸವೇ. [QE]
6. [QS]ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ [QE][QS]ಸಾಷ್ಟಾಂಗವೆರಗಿ ಆರಾಧಿಸೋಣ. [QE]
7. [QS]ಆತನು ನಮ್ಮ ದೇವರು; [QE][QS]ನಾವೋ ಆತನು ಪಾಲಿಸುವ ಪ್ರಜೆಯೂ, [QE][QS]ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. [QE][QS]ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. [QE]
8. [QS]ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ[* ಮೆರೀಬ ಅಂದರೆ ವಾಗ್ವಾದ. ], [QE][QS]ಮಸ್ಸಾದಲ್ಲಿ [† ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33:8. ] ಮಾಡಿದ ದಿನದಂತೆ, [QE][QS]ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. [QE]
9. [QS]ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; [QE][QS]ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. [QE]
10. [QS]ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; [QE][QS]“ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, [QE][QS]ನನ್ನ ಆಜ್ಞೆಗಳಿಗೆ ವಿಧೇಯರಾಗದವರು[‡ ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ]” ಎಂದು ಹೇಳಿದೆನು. [QE]
11. [QS]ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು [QE][QS]ಕೋಪಗೊಂಡು ಪ್ರಮಾಣಮಾಡಿದೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 95 / 150
ದೇವರನ್ನು ವಿಶ್ವಾಸದಿಂದ ಆರಾಧಿಸುವುದು
ಕೀರ್ತ 81; 96-100

1 ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. 2 ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. 3 ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ. 4 ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ. 5 ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ. 6 ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. 7 ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. 8 ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ* ಮೆರೀಬ ಅಂದರೆ ವಾಗ್ವಾದ. , ಮಸ್ಸಾದಲ್ಲಿ [† ಮಸ್ಸಾದಲ್ಲಿ ಅಂದರೆ ಪರೀಕ್ಷೆ, ವಿಮೋ 17:1-17, ಅರಣ್ಯ 20:1-13, ಧರ್ಮೋ 6:16, 33: 8 ] ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. 9 ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು. 10 ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು ನನ್ನ ಆಜ್ಞೆಗಳಿಗೆ ವಿಧೇಯರಾಗದವರು ಅಥವಾ ನನ್ನ ಮಾರ್ಗವನ್ನು ತಿಳಿಯದವರು. ” ಎಂದು ಹೇಳಿದೆನು. 11 ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 95 / 150
×

Alert

×

Kannada Letters Keypad References