ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; [QBR] ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. [QBR]
2. ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. [QBR] ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. [QBR]
3. ಜನಾಂಗಗಳಲ್ಲಿ ಆತನ ಘನತೆಯನ್ನೂ, [QBR] ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. [QBR]
4. ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; [QBR] ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. [QBR]
5. ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; [QBR] ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. [QBR]
6. ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, [QBR] ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. [QBR]
7. ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, [QBR] ಎಂದು ಹೇಳಿ ಆತನನ್ನು ಘನಪಡಿಸಿರಿ. [QBR]
8. ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; [QBR] ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. [QBR]
9. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; [QBR] ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. [QBR]
10. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; [QBR] ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು [QBR] ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. [QBR]
11. ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; [QBR] ಭೂಲೋಕವು ಸಂತೋಷಿಸಲಿ; [QBR] ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. [QBR]
12. ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; [QBR] ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. [QBR]
13. ಆತನು ಬರುತ್ತಾನೆ; [QBR] ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. [QBR] ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, [QBR] ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 96 / 150
ಕೀರ್ತನೆಗಳು 96:38
1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. 2 ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 3 ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. 4 ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. 5 ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. 6 ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. 7 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ. 8 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. 9 ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. 10 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 11 ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. 12 ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. 13 ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 96 / 150
Common Bible Languages
West Indian Languages
×

Alert

×

kannada Letters Keypad References