1. {#3ರಾಜಾಧಿರಾಜನಾದ ಯೆಹೋವನ ಆಗಮನ [BR]1ಪೂರ್ವ 16:23-33 } [QS]ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; [QE][QS]ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ. [QE]
2. [QS]ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. [QE][QS]ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. [QE]
3. [QS]ಜನಾಂಗಗಳಲ್ಲಿ ಆತನ ಘನತೆಯನ್ನೂ, [QE][QS]ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ. [QE]
4. [QS]ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; [QE][QS]ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು. [QE]
5. [QS]ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; [QE][QS]ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು. [QE]
6. [QS]ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, [QE][QS]ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ. [QE]
7. [QS]ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, [QE][QS]ಎಂದು ಹೇಳಿ ಆತನನ್ನು ಘನಪಡಿಸಿರಿ. [QE]
8. [QS]ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; [QE][QS]ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ. [QE]
9. [QS]ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; [QE][QS]ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ. [QE]
10. [QS]ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QE][QS]ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; [QE][QS]ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು [QE][QS]ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. [QE]
11. [QS]ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; [QE][QS]ಭೂಲೋಕವು ಸಂತೋಷಿಸಲಿ; [QE][QS]ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ. [QE]
12. [QS]ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; [QE][QS]ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ. [QE]
13. [QS]ಆತನು ಬರುತ್ತಾನೆ; [QE][QS]ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. [QE][QS]ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, [QE][QS]ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. [QE]