ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು } [QS]ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QE][QS]ಭೂಲೋಕವು ಸಂತೋಷಿಸಲಿ; [QE][QS]ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. [QE]
2. [QS]ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; [QE][QS]ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ[* ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ. ]. [QE]
3. [QS]ಬೆಂಕಿಯು ಆತನ ಮುಂದೆ ಹೋಗಿ, [QE][QS]ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. [QE]
4. [QS]ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; [QE][QS]ಭೂಮಿಯು ಅದನ್ನು ಕಂಡು ನಡುಗಿತು. [QE]
5. [QS]ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ [QE][QS]ಪರ್ವತಗಳು ಮೇಣದಂತೆ ಕರಗಿಹೋದವು. [QE]
6. [QS]ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; [QE][QS]ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. [QE]
7. [QS]ವಿಗ್ರಹಗಳಲ್ಲಿ ಹಿಗ್ಗುವವರೂ, [QE][QS]ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; [QE][QS][† ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ. ]ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. [QE]
8. [QS]ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ [QE][QS]ಚೀಯೋನ್ ಪಟ್ಟಣವು ಹರ್ಷಿಸಿತು; [QE][QS]ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. [QE]
9. [QS]ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; [QE][QS]ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. [QE]
10. [QS] [‡ ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ]ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. [QE][QS]ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, [QE][QS]ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. [QE]
11. [QS]ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು[§ ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. ], [QE][QS]ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. [QE]
12. [QS]ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; [QE][QS]ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.[* ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ. ] [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 97 / 150
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು 1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಲೋಕವು ಸಂತೋಷಿಸಲಿ; ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. 2 ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ* ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ. . 3 ಬೆಂಕಿಯು ಆತನ ಮುಂದೆ ಹೋಗಿ, ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. 4 ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; ಭೂಮಿಯು ಅದನ್ನು ಕಂಡು ನಡುಗಿತು. 5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು. 6 ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. 7 ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ. ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. 8 ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ ಚೀಯೋನ್ ಪಟ್ಟಣವು ಹರ್ಷಿಸಿತು; ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. 9 ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. 10 ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. 11 ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು§ ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. , ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. 12 ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.* ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 97 / 150
×

Alert

×

Kannada Letters Keypad References