ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು [BR]ಕೀರ್ತ 67 } [QS]ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; [QE][QS]ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. [QE][QS]ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. [QE]
2. [QS]ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; [QE][QS]ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. [QE]
3. [QS]ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, [QE][QS]ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. [QE][QS]ಭೂಲೋಕದ ಎಲ್ಲಾ ಕಡೆಯವರೂ, [QE][QS]ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. [QE]
4. [QS]ಸಮಸ್ತ ಭೂನಿವಾಸಿಗಳೇ, [QE][QS]ಯೆಹೋವನಿಗೆ ಜಯಘೋಷಮಾಡಿರಿ; [QE][QS]ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. [QE]
5. [QS]ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; [QE][QS]ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. [QE]
6. [QS]ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, [QE][QS]ಯೆಹೋವರಾಜನಿಗೆ ಜಯಘೋಷಮಾಡಿರಿ. [QE]
7. [QS]ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, [QE][QS]ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. [QE]
8. [QS]ನದಿಗಳು ಚಪ್ಪಾಳೆ ಹೊಡೆಯಲಿ; [QE][QS]ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. [QE]
9. [QS]ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; [QE][QS]ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, [QE][QS]ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು
ಕೀರ್ತ 67

1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. 5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. 6 ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. 7 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8 ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
×

Alert

×

Kannada Letters Keypad References