ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; [QBR] ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. [QBR] ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. [QBR]
2. ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; [QBR] ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. [QBR]
3. ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, [QBR] ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. [QBR] ಭೂಲೋಕದ ಎಲ್ಲಾ ಕಡೆಯವರೂ, [QBR] ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. [QBR]
4. ಸಮಸ್ತ ಭೂನಿವಾಸಿಗಳೇ, [QBR] ಯೆಹೋವನಿಗೆ ಜಯಘೋಷಮಾಡಿರಿ; [QBR] ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. [QBR]
5. ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; [QBR] ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. [QBR]
6. ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, [QBR] ಯೆಹೋವರಾಜನಿಗೆ ಜಯಘೋಷಮಾಡಿರಿ. [QBR]
7. ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, [QBR] ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. [QBR]
8. ನದಿಗಳು ಚಪ್ಪಾಳೆ ಹೊಡೆಯಲಿ; [QBR] ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. [QBR]
9. ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; [QBR] ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, [QBR] ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು. [PE]

Notes

No Verse Added

Total 150 Chapters, Current Chapter 98 of Total Chapters 150
ಕೀರ್ತನೆಗಳು 98:12
1. ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ.
ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ.
2. ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ;
ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.
3. ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ,
ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ.
ಭೂಲೋಕದ ಎಲ್ಲಾ ಕಡೆಯವರೂ,
ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
4. ಸಮಸ್ತ ಭೂನಿವಾಸಿಗಳೇ,
ಯೆಹೋವನಿಗೆ ಜಯಘೋಷಮಾಡಿರಿ;
ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.
5. ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ;
ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ.
6. ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ,
ಯೆಹೋವರಾಜನಿಗೆ ಜಯಘೋಷಮಾಡಿರಿ.
7. ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ,
ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.
8. ನದಿಗಳು ಚಪ್ಪಾಳೆ ಹೊಡೆಯಲಿ;
ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.
9. ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ;
ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು. PE
Total 150 Chapters, Current Chapter 98 of Total Chapters 150
×

Alert

×

kannada Letters Keypad References