ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; [QBR] ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. [QBR] ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. [QBR]
2. ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; [QBR] ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. [QBR]
3. ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, [QBR] ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. [QBR] ಭೂಲೋಕದ ಎಲ್ಲಾ ಕಡೆಯವರೂ, [QBR] ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. [QBR]
4. ಸಮಸ್ತ ಭೂನಿವಾಸಿಗಳೇ, [QBR] ಯೆಹೋವನಿಗೆ ಜಯಘೋಷಮಾಡಿರಿ; [QBR] ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. [QBR]
5. ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; [QBR] ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. [QBR]
6. ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, [QBR] ಯೆಹೋವರಾಜನಿಗೆ ಜಯಘೋಷಮಾಡಿರಿ. [QBR]
7. ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, [QBR] ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. [QBR]
8. ನದಿಗಳು ಚಪ್ಪಾಳೆ ಹೊಡೆಯಲಿ; [QBR] ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. [QBR]
9. ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; [QBR] ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, [QBR] ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
ಕೀರ್ತನೆಗಳು 98:8
1 ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಆತನು ಅದ್ಭುತಕೃತ್ಯಗಳನ್ನು ನಡೆಸಿದ್ದಾನೆ. ಆತನ ಬಲಗೈಯೂ, ಪರಿಶುದ್ಧಬಾಹುವೂ ಜಯವನ್ನು ಉಂಟುಮಾಡಿವೆ. 2 ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ. 3 ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ. 4 ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ. 5 ಕಿನ್ನರಿಯೊಡನೆ ಯೆಹೋವನನ್ನು ಸ್ತುತಿಸಿರಿ; ಕಿನ್ನರಿಯನ್ನು ನುಡಿಸುತ್ತಾ ಭಜಿಸಿರಿ. 6 ತುತ್ತೂರಿಗಳನ್ನೂ, ಕೊಂಬನ್ನೂ ಊದುತ್ತಾ, ಯೆಹೋವರಾಜನಿಗೆ ಜಯಘೋಷಮಾಡಿರಿ. 7 ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ. 8 ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ. 9 ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 98 / 150
Common Bible Languages
West Indian Languages
×

Alert

×

kannada Letters Keypad References