1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. |
4. ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ * ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ;
ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. |
6. ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,
ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. |
8. ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.
ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. |
9. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು. PE |