ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಜನಾಂಗಗಳು ನಡುಗಲಿ. [QBR] ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; [QBR] ಭೂಮಿಯು ಕಂಪಿಸಲಿ. [QBR]
2. ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; [QBR] ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. [QBR]
3. ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; [QBR] ಆತನು ಪರಿಶುದ್ಧನು. [QBR]
4. ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ [* ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ] ; [QBR] ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, [QBR] ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. [QBR]
5. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. [QBR] ಆತನು ಪರಿಶುದ್ಧನು. [QBR]
6. ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, [QBR] ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, [QBR] ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. [QBR]
7. ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; [QBR] ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. [QBR]
8. ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. [QBR] ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, [QBR] ಕ್ಷಮಿಸುವ ದೇವರಾಗಿದ್ದಿ. [QBR]
9. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. [QBR] ನಮ್ಮ ಯೆಹೋವ ದೇವರು ಪರಿಶುದ್ಧನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
ಕೀರ್ತನೆಗಳು 99:23
1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. 2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. 3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು. 4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ * ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. 5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. 6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. 7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. 8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. 9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
Common Bible Languages
West Indian Languages
×

Alert

×

kannada Letters Keypad References