ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಜನಾಂಗಗಳು ನಡುಗಲಿ. [QBR] ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; [QBR] ಭೂಮಿಯು ಕಂಪಿಸಲಿ. [QBR]
2. ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; [QBR] ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. [QBR]
3. ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; [QBR] ಆತನು ಪರಿಶುದ್ಧನು. [QBR]
4. ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ [* ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ] ; [QBR] ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, [QBR] ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. [QBR]
5. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. [QBR] ಆತನು ಪರಿಶುದ್ಧನು. [QBR]
6. ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, [QBR] ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, [QBR] ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. [QBR]
7. ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; [QBR] ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. [QBR]
8. ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. [QBR] ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, [QBR] ಕ್ಷಮಿಸುವ ದೇವರಾಗಿದ್ದಿ. [QBR]
9. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QBR] ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. [QBR] ನಮ್ಮ ಯೆಹೋವ ದೇವರು ಪರಿಶುದ್ಧನು. [PE]

Notes

No Verse Added

Total 150 Chapters, Current Chapter 99 of Total Chapters 150
ಕೀರ್ತನೆಗಳು 99:4
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಜನಾಂಗಗಳು ನಡುಗಲಿ.
ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ;
ಭೂಮಿಯು ಕಂಪಿಸಲಿ.
2. ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು;
ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು.
3. ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ;
ಆತನು ಪರಿಶುದ್ಧನು.
4. ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ * ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ;
ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ,
ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ.
5. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ.
ಆತನು ಪರಿಶುದ್ಧನು.
6. ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ,
ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ,
ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.
7. ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು;
ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.
8. ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ.
ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ,
ಕ್ಷಮಿಸುವ ದೇವರಾಗಿದ್ದಿ.
9. ನಮ್ಮ ಯೆಹೋವ ದೇವರನ್ನು ಘನಪಡಿಸಿರಿ;
ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ.
ನಮ್ಮ ಯೆಹೋವ ದೇವರು ಪರಿಶುದ್ಧನು. PE
Total 150 Chapters, Current Chapter 99 of Total Chapters 150
×

Alert

×

kannada Letters Keypad References