1. {#1ಘಟಸರ್ಪ ಮತ್ತು ಸ್ತ್ರೀ } [PS]ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು [* ಕೀರ್ತ 104:2; ಪರಮ. 6:10: ]ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.
2. [† ಯೆಶಾ 66:7-10; ಮೀಕ. 4:10; ಮತ್ತಾ 24:8; ಯೋಹಾ 16:21: ]ಆಕೆಯು ಗರ್ಭಿಣಿಯಾಗಿದ್ದು ಹೆರುವುದಕ್ಕೆ ಪ್ರಸವವೇದನೆಯಿಂದ ನರಳುತ್ತಾ ಅಳುತ್ತಿದ್ದಳು.
3. ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ [‡ ಯೆಶಾ 27:1; ಪ್ರಕ 17:3: ]ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ [§ ಪ್ರಕ 13:1; 17:9, 12: ]ಏಳು ತಲೆಗಳೂ [* ದಾನಿ. 7:7: ]ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ [† ಪ್ರಕ 19:12: ]ಏಳು ಕಿರೀಟಗಳು ಇದ್ದವು.
4. ಅದು ತನ್ನ ಬಾಲದಿಂದ [‡ ಪ್ರಕ 8:7: ]ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು [§ ದಾನಿ. 8:10: ]ಭೂಮಿಗೆ ಎಸೆಯಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ [* ಮತ್ತಾ 2:16: ]ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಆಕೆಯ ಮುಂದೆ ನಿಂತುಕೊಂಡಿತ್ತು.
5. ಆಕೆ [† ಮತ್ತಾ 2:6; ಪ್ರಕ 2:27: ]ಜನಾಂಗಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ಪಕ್ಕನೆ ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
6. ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ [‡ ಪ್ರಕ 11:2, 3; 13:5: ]ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು. [PE]
7. [PS]ಪರಲೋಕದಲ್ಲಿ ಯುದ್ಧ ನಡೆಯಿತು. [§ ಯೂದ. 9: ]ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ [* ಮತ್ತಾ 25:41; 2 ಪೇತ್ರ. 2:4; ಯೂದ 6: ]ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.
8. ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.
9. [† ಪ್ರಕ 20:3, 10; 13:14; ಯೋಹಾ 8:44: ]ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ [‡ ಆದಿ 3:1; ಪ್ರಕ 20:2: ]ಪುರಾತನ ಸರ್ಪವನ್ನು [§ ಲೂಕ 10:18; ಯೊಹಾ. 12:31: ]ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು. [PE]
10. [PS]ಆಗ ಪರಲೋಕದಲ್ಲಿ ಮಹಾಶಬ್ದವನ್ನು ಕೇಳಿದೆನು. ಅದು, “ಈಗ ನಮ್ಮ ದೇವರ [* ಅಥವಾ ಜಯವೂ. ಪ್ರಕ 7:10; 19:1: ]ರಕ್ಷಣೆಯೂ, ಶಕ್ತಿಯೂ, ರಾಜ್ಯವೂ, ಆತನ ಕ್ರಿಸ್ತನ ಅಧಿಪತ್ಯ ಆರಂಭವಾಗಿದೆ. ಹಗಲಿರುಳು ನಮ್ಮ ಸಹೋದರರನ್ನು ಕುರಿತು ನಮ್ಮ ದೇವರ ಮುಂದೆ ಸದಾ [† ಯೋಬ. 1:9; 2:5; ಜೆಕ. 3:1: ]ದೂರು ಹೇಳುತ್ತಿದ್ದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.
11. ಅವರು [‡ ಪ್ರಕ 2:10: ]ಮರಣದವರೆಗೆ ತಮ್ಮ [§ ಲೂಕ 14:26; ಯೋಹಾ 12:25: ]ಪ್ರಾಣವನ್ನು ಪ್ರೀತಿಸದೆ, ಯಜ್ಞದ ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ [* ಪ್ರಕ 15:2; ಯೋಹಾ 16:33; ರೋಮಾ. 8:37; 16:20: ]ಅವನನ್ನು ಜಯಿಸಿದರು.
12. ಆದ್ದರಿಂದ [† ಕೀರ್ತ 96:11; ಯೆಶಾ 44:23; 49:13; ಪ್ರಕ 18:20: ]ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ [‡ ಪ್ರಕ 8:13: ]ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು [§ ಮತ್ತಾ 8:29; ಪ್ರಕ 10:6: ]ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು. [PE]
13. [PS]ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, [* ವ. 5: ]ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
14. ಆದರೆ ಆ ಸ್ತ್ರೀಯು [† ವ. 6: ]ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ [‡ ವಿಮೋ 19:4: ]ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.
15. ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.
16. ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು.
17. ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, [§ ಆದಿ 3:15: ]ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ, [* ಪ್ರಕ 14:12; 1 ಯೋಹಾ 2:3: ]ದೇವರ ಆಜ್ಞೆಗಳನ್ನು ಕೈಗೊಂಡು ನಡೆದು [† ಪ್ರಕ 1:2; 6:9; 19:10: ]ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ [‡ ಪ್ರಕ 11:7; 13:7: ]ಯುದ್ಧಮಾಡುವುದಕ್ಕೆ ಹೊರಟು, (18) ಸಮುದ್ರ ತೀರದ ಮರಳಿನ ಮೇಲೆ ನಿಂತನು. [PE]