1. {#1ಎರಡು ಮೃಗಗಳು } [PS] [* ದಾನಿ. 7:2-8: ]ಸಮುದ್ರದಿಂದ ಒಂದು ಮೃಗವು ಏರಿಬರುವುದನ್ನು ಕಂಡೆನು. [† ಪ್ರಕ 12:3: ]ಅದಕ್ಕೆ ಏಳು ತಲೆಗಳೂ, ಹತ್ತು ಕೊಂಬುಗಳೂ, ಕೊಂಬುಗಳ ಮೇಲೆ ಹತ್ತು ಕಿರೀಟಗಳೂ, ಹಣೆಗಳ ಮೇಲೆ [‡ ಪ್ರಕ 17:3: ]ದೇವದೂಷಣೆಯ ನಾಮಗಳೂ ಇದ್ದವು.
2. ನಾನು ಕಂಡ ಮೃಗವು ಚಿರತೆಯಂತಿತ್ತು ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಿಯಂತೆಯೂ ಇದ್ದವು. [§ ಪ್ರಕ 13:4, 11; ಲೂಕ 4:6: ]ಅದಕ್ಕೆ ಘಟಸರ್ಪನು ಶಕ್ತಿಯನ್ನೂ, [* ಪ್ರಕ 16:10: ]ಸಿಂಹಾಸನವನ್ನೂ, ಮಹಾ ಅಧಿಕಾರವನ್ನೂ ಕೊಟ್ಟನು.
3. ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, [† ಪ್ರಕ 17:8: ]ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.
4. ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, [‡ ಪ್ರಕ 18:18: ]“ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು. [PE]
5. [PS] [§ ದಾನಿ. 7:8, 11, 20; 11:36; 2 ಥೆಸ. 2:4: ]ಬಡಾಯಿಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು ಮತ್ತು [* ಪ್ರಕ 11:2; 12:6: ]ನಲವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.
6. ಆ ಮೃಗವು ಬಾಯಿದೆರೆದು ದೇವರನ್ನು ದೂಷಿಸಿದ್ದಲ್ಲದೆ ಆತನ ನಾಮವನ್ನೂ, ಆತನು ವಾಸಿಸುವ ನಿವಾಸವನ್ನೂ, ಪರಲೋಕ ನಿವಾಸಿಗಳನ್ನೂ ದೂಷಿಸಿತು.
7. [† ಕೆಲವು ಪ್ರತಿಗಳಲ್ಲಿ ಈ ವಾಕ್ಯವು ಇಲ್ಲ. ]ಇದಲ್ಲದೆ ದೇವಜನರ ಮೇಲೆ [‡ ದಾನಿ. 7:21; ಪ್ರಕ 11:7; 12:17: ]ಯುದ್ಧ ಮಾಡಿ ಅವರನ್ನು ಜಯಿಸುವುದಕ್ಕೆ ಅದಕ್ಕೆ ಅಧಿಕಾರ ಕೊಡಲ್ಪಟ್ಟಿತು ಮತ್ತು ಸಕಲ ಕುಲ, ಜನ, ಭಾಷೆ, ಜನಾಂಗಗಳ ಮೇಲೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
8. [§ ಅ. ಕೃ. 2:23; 1 ಪೇತ್ರ. 1:19, 20: ]ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ [* ಪ್ರಕ 3:5: ]ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ [† ಪ್ರಕ 3:10: ]ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು. [PE]
9. [PS] [‡ ಪ್ರಕ 2:7: ]ಕಿವಿಯುಳ್ಳವನು ಕೇಳಲಿ,
10. [§ ಯೆಶಾ 33:1; ಯೆರೆ 15:2; 43:11: ]ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, [* ಆದಿ 9:6; ಮತ್ತಾ 26:52: ]ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. [† ಪ್ರಕ 14:12: ]ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. [PE]
11. [PS] [‡ ಅಂದರೆ, ಸುಳ್ಳುಪ್ರವಾದಿ; ಪ್ರಕ 13:1, 14; 16:13; 19:20: ]ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ [§ ಮೂಲ. ಕುರಿಮರಿಗಿರುವಂತೆ. ]ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.
12. ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ [* ವ. 9: ]ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
13. ಇದು ಜನರ ಮುಂದೆ [† ಪ್ರಕ 20:9; 1 ಅರಸು. 18:38; 2 ಅರಸು. 1:10, 12; ಲೂಕ 9:54: ]ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,
14. ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು [‡ ಪ್ರಕ 12:9: ]ಮರಳುಗೊಳಿಸಿತ್ತು. ಅವರಿಗೆ, [§ ಪ್ರಕ 13:3, 12: ]ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.
15. ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, [* ಪ್ರಕ 14:9, 11; 16:2; 19:20; 20:4: ]ತನ್ನನ್ನು ಆರಾಧಿಸದವರೆಲ್ಲರಿಗೂ [† ಪ್ರಕ 16:6: ]ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.
16. ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ [‡ ಪ್ರಕ 7:3; ಗಲಾ. 6:17: ]ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
17. ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡೆಸಲು ಸಾಧ್ಯವಿರಲಿಲ್ಲ. ಆ ಗುರುತು ಯಾವುದೆಂದರೆ [§ ಪ್ರಕ 14:11: ]ಮೊದಲನೆಯ ಮೃಗದ ಹೆಸರು ಅಥವಾ [* ಪ್ರಕ 15:2: ]ಅದರ ಹೆಸರನ್ನು ಸೂಚಿಸುವ ಸಂಖ್ಯೆ. [PE]
18. [PS] [† ಪ್ರಕ 17, 9: ]ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666. [PE]