1. {#1ಬಾಬೆಲೆಂಬ ಜಾರಸ್ತ್ರೀಯ ನಾಶವು } [PS] [* ಪ್ರಕ 15:7: ]ಏಳು ಬಟ್ಟಲುಗಳನ್ನು ಹಿಡಿದಿದ್ದ [† ಪ್ರಕ 21:9 ]ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, [‡ ಯೆರೆ 51:13; ಪ್ರಕ 17:15: ]ಬಹಳ ನೀರುಗಳ ಮೇಲೆ ಕುಳಿತ್ತಿರುವ [§ ನಹೂ. 3:4; ಪ್ರಕ 19:2; ಯೆಶಾ 1:21; ಯೆರೆ 2:20 ]ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.
2. [* ಅಥವಾ ಅವಳ ದುಷ್ಕರ್ಮವನ್ನು ನೋಡಿ. ]ಅವಳೊಂದಿಗೆ ಭೂರಾಜರು [† ಅಂದರೆ, ದೇವದ್ರೋಹ; ಯೆಶಾ 23:17; ನಹೂ. 3:4: ]ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು [‡ ಯೆರೆ 51:7; ಪ್ರಕ 14:8: ]ಮತ್ತರಾದರು” ಎಂದು ನನಗೆ ಹೇಳಿದನು.
3. ಆಗ ಅವನು ದೇವರಾತ್ಮವಶನಾದ ನನ್ನನ್ನು [§ ಪ್ರಕ 21:10; ಯೆರೆ 43:5: ]ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು [* ಪ್ರಕ 12:3: ]ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ [† ಪ್ರಕ 13:1 ]ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. [‡ ಪ್ರಕ 17:7, 9, 12: ]ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.
4. ಆ ಸ್ತ್ರೀಯು [§ ನೇರಳೆ. ಪ್ರಕ 18:16: ]ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ [* ಯೆರೆ 51:7; ಪ್ರಕ 18:6: ]ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.
5. ಅವಳ ಹಣೆಯ ಮೇಲೆ, “ಮಹತ್ತಾದ [† ಪ್ರಕ 14:8: ]ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ [‡ ವ. 7: ]ಹೆಸರನ್ನು ಬರೆಯಲಾಗಿತ್ತು.
6. ಆ ಸ್ತ್ರೀಯು [§ ಪ್ರಕ 16:6; 13:15: ]ನೀತಿವಂತರ ರಕ್ತವನ್ನೂ [* ಪ್ರಕ 2:13: ]ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. [PE][PS]ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.
7. ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ [† ವ. 5: ]ಗೂಢಾರ್ಥವನ್ನು [‡ ವ. 11; ಪ್ರಕ 1:4; 13:3: ]ನಾನು ನಿನಗೆ ವಿವರಿಸುತ್ತೇನೆ.
8. ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು [§ ಪ್ರಕ 9:1: ]ಅಧೋಲೋಕದೊಳಗಿನಿಂದ [* ಪ್ರಕ 11:7: ]ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು [† ಪ್ರಕ 3:5: ]ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು. [PE]
9. [PS]“ಇದನ್ನು ಗ್ರಹಿಸಿಕೊಳ್ಳಲು [‡ ಪ್ರಕ 13:18: ]ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.
10. [§ ಅಥವಾ, ಇದಲ್ಲದೆ ಏಳು ಮಂದಿ ಅರಸುಗಳಿದ್ದಾರೆ. ]ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
11. ಇದಲ್ಲದೆ [* ವ. 8; ಪ್ರಕ 11:17: ]ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುವನು. [PE]
12. [PS]“[† ವ. 16; ದಾನಿ. 7:24; ಜೆಕ. 1:18-21; ಪ್ರಕ 13:1: ]ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ [‡ ಪ್ರಕ 18:10, 17, 19: ]ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
13. ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು.
14. [§ ಪ್ರಕ 16:14: ]ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು [* ಧರ್ಮೋ 10:17; ಕೀರ್ತ 136:3; ದಾನಿ. 2:47; 1 ತಿಮೊ. 6:15; ಪ್ರಕ 19:16; ಅ. ಕೃ. 10:36: ]ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು [† ಪ್ರಕ 3:21: ]ಅವರನ್ನು ಜಯಿಸುವನು ಮತ್ತು ದೇವರು [‡ ಲೂಕ 18:7; ರೋಮಾ. 1:6: ]ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.” [PE]
15. [PS]ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, [§ ವ. 1: ]“ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.
16. ಇದಲ್ಲದೆ ನೀನು ನೋಡಿದ [* ವ. 12; ದಾನಿ. 7:24; ಜೆಕ. 1:18-21; ಪ್ರಕ 13:1: ]ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ [† ಯೆಹೆ. 16:37, 39: ]ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, [‡ ಪ್ರಕ 18:8; ಯಾಜ 21:9: ]ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.
17. ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ [§ 2 ಥೆಸ. 2:11: ]ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.
18. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ [* ಪ್ರಕ 16:19; 11:8: ]ಮಹಾನಗರಿಯೇ ಆಗಿದೆ.” [PE]