1. [PS]ಇದಾದ ಮೇಲೆ [* ಪ್ರಕ 11:15: ]ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ [† ಅಂದರೆ. ಕರ್ತನನ್ನು ಸ್ತುತಿಸಿರಿ; ಕೀರ್ತ 105:45; 106:1: ]ಹಲ್ಲೆಲೂಯಾ. [‡ ಅಥವಾ, ರಕ್ಷಣೆಯೂ. ]ರಕ್ಷಣೆಯೂ, [§ ಪ್ರಕ 4:11; 7:10; 12:10: ]ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ.
2. [* ಪ್ರಕ 15:3; 16:7: ]ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ [† ಪ್ರಕ 17:1: ]ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ [‡ ಧರ್ಮೋ 32:43; 2 ಅರಸು. 9:7; ಪ್ರಕ 6:10; 16:6: ]ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,
3. ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, [§ ಯೆಶಾ 34:10; ಪ್ರಕ 18:9, 18; ಪ್ರಕ 14:11: ]ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.
4. ಆಗ [* ಪ್ರಕ 4:4, 6, 10; 5:14: ]ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, [† ಅಂದರೆ, ತಥಾಸ್ತು, ಹಾಗೆಯೇ ಆಗಲಿ. ]“ಆಮೆನ್, ಹಲ್ಲೆಲೂಯಾ” ಎಂದರು. [PE]
5. {#1ಕುರಿಮರಿಯ ವಿವಾಹದ ಔತಣ } [PS]ಆ ಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿಯು, “ದೇವರ ಸೇವಕರೆಲ್ಲರೂ, ದೇವರಿಗೆ ಭಯಪಡುವ ಶ್ರೇಷ್ಠರು ಮತ್ತು ಕನಿಷ್ಠರು [‡ ಕೀರ್ತ 22:23; 113:1; 134:1; 135:1: ]ನಮ್ಮ ದೇವರನ್ನು ಕೊಂಡಾಡಿರಿ” ಎಂದು ಹೇಳಿತು.
6. ತರುವಾಯ [§ ವ. 1; ದಾನಿ. 10:6: ]ಬಹುದೊಡ್ಡ ಜನರ ಸಮೂಹದ ಶಬ್ದವು [* ಪ್ರಕ 1:15: ]ಜಲಪ್ರವಾಹದ ಘೋಷದಂತೆಯೂ [† ಪ್ರಕ 6:1; 14:2; ]ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು [‡ ಕೀರ್ತ 97:1; ಪ್ರಕ 11:15, 17: ]ಆಳುತ್ತಾನೆ.
7. [§ ಮತ್ತಾ 22:2; 25:10; ಲೂಕ 12:36; 14:8; ಎಫೆ 5:22-32: ]ಯಜ್ಞದ ಕುರಿಮರಿಯಾದಾತನ ವಿವಾಹಕಾಲವು ಬಂದಿತೆಂದು ಸಂತೋಷಪಡೋಣ, ಹರ್ಷಗೊಳ್ಳೋಣ, ಆತನನ್ನು ಘನಪಡಿಸೋಣ, ಏಕೆಂದರೆ ಆತನನ್ನು ವಿವಾಹವಾಗುವ ಕನ್ಯೆಯು [* ಪ್ರಕ 21:2, 9; ಯೆಶಾ 54:5, 6; ಹೋಶೇ. 2:19, 20: ]ತನ್ನನ್ನು ತಾನೇ ಸಿದ್ಧಮಾಡಿಕೊಂಡಿದ್ದಾಳೆ” ಎಂದು ಹೇಳಿತು.
8. [† ಕೀರ್ತ 45:13-15; ಯೆಹೆ. 16:10: ]ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ [‡ ಕೀರ್ತ 132:9; ಯೆಶಾ 61:10: ]ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).
9. ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, [§ ವ. 7; ಲೂಕ 14:15: ]“ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, [* ಪ್ರಕ 21:5; 22:6: ]“ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು. [PE]
10.
22. [PS]ಆಗ [† ಪ್ರಕ 22:8: ]ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು [‡ ಪ್ರಕ 22:9; ಅ. ಕೃ. 10:26; 14:15: ]ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, [§ ಪ್ರಕ 1:2; 6:9; 12:17: ]ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ [* ಅಥವಾ, ನಮಸ್ಕಾರಮಾಡು; ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿಸುವ ಆತ್ಮನು ಪ್ರವಾದನೆಯನ್ನು ಹೇಳಿಸುವ ಆತ್ಮನೇ ಅಂದನು. ]ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು. [PE][PS] [† ಯೆಹೆ. 1:1: ]ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, [‡ ಪ್ರಕ 6:2: ]ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ [§ ಪ್ರಕ 3:7, 14 ]ನಂಬಿಗಸ್ತನು, ಸತ್ಯವಂತನು ಎಂದು ಹೆಸರು. [* ಕೀರ್ತ 96:13; ಯೆಶಾ 11:4: ]ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.
12. [† ಪ್ರಕ 1:14; 2:18: ]ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತಿವೆ, ಆತನ ತಲೆಯ ಮೇಲೆ [‡ ಪ್ರಕ 12:3: ]ಅನೇಕ ಕಿರೀಟಗಳುಂಟು, [§ ವ. 16: ]ಆತನಿಗೆ ಒಂದು ಹೆಸರು ಬರೆದುಕೊಡಲ್ಪಟ್ಟಿದೆ, [* ಪ್ರಕ 2:17: ]ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.
13. ಆತನು [† ಯೆಶಾ 63:2,3. ]ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. [‡ ಯೋಹಾ 1:1-18: ]ಆತನಿಗೆ ದೇವರ ವಾಕ್ಯವೆಂದು ಹೆಸರು.
14. ಪರಲೋಕದಲ್ಲಿರುವ ಸೈನ್ಯವು [§ ಪ್ರಕ 3:4; 7:9: ]ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.
15. [* ಯೆಶಾ 11:4; 2 ಥೆಸ. 2:8; ಇಬ್ರಿ. 4:12: ]ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. [† ಕೀರ್ತ 2:9; ಪ್ರಕ 2:27; 12:5: ]ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. [‡ ಯೆಶಾ 63:3; ಪ್ರಕ 14:20: ]ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.
16. ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “[§ ಪ್ರಕ 17:14: ]ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ [* ವ. 12: ]ಹೆಸರು ಬರೆದಿದೆ. [PE]
17. [PS]ಆ ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ [† ವ. 21: ]ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, [‡ ಯೆಶಾ 34:6; ಯೆರೆ 12:9; 46:10; ಯೆಹೆ. 39:17-20: ]ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿ ಬನ್ನಿರಿ,
18. ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು. [PE]
19. [PS]ತರುವಾಯ [§ ಪ್ರಕ 11:7; 13:1: ]ಆ ಮೃಗವೂ, ಭೂರಾಜರೂ, ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ [* ಪ್ರಕ 16:14, 16: ]ಯುದ್ಧಮಾಡುವುದಕ್ಕಾಗಿ ಕೂಡಿಬಂದಿರುವುದನ್ನು ಕಂಡೆನು.
20. ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ [† ಪ್ರಕ 13:11-17; 16:13: ]ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ [‡ ಪ್ರಕ 13:15: ]ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ [§ ಆದಿ 19:24; ಪ್ರಕ 14:10; 21:8; 2 ಥೆಸ. 1:8: ]ಗಂಧಕದಿಂದ ಉರಿಯುವ [* ಪ್ರಕ 20:10, 14, 15; ದಾನಿ. 7:11: ]ಬೆಂಕಿಯ ಕೆರೆಗೆ ಹಾಕಲಾಯಿತು.
21. ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ [† ವ. 15: ]ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, [‡ ವ. 17: ]ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು. [PE]