1. {#1ಏಳನೆಯ ಮುದ್ರೆ } [PS] [* ಯಜ್ಞದ ಕುರಿಮರಿ ಅಥವಾ ಯೇಸುಕ್ರಿಸ್ತನು. ]ಆತನು [† ಪ್ರಕ 5:1; 6:1: ]ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.
2. ಆಗ [‡ ಲೂಕ 1:19: ]ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು. [PE]
3. [PS]ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು [§ ವಿಮೋ 30. 1, 3; ಪ್ರಕ 9:13: ]ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ [* ಪ್ರಕ 5:8: ]ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.
4. ಆಗ ಧೂಪದ ಹೊಗೆಯು ದೇವದೂತನ ಕೈಯಿಂದ ಹೊರಟು [† ಕೀರ್ತ 141:2: ]ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ ದೇವರ ಸನ್ನಿಧಿಗೆ ಏರಿಹೋಯಿತು.
5. ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು [‡ ಯಾಜ 16:12: ]ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಯ ಮೇಲೆ ಎಸೆದನು. ಆಗ ಗರ್ಜಿಸುವ [§ ಪ್ರಕ 4:5: ]ಗುಡುಗು, ಮಹಾಶಬ್ದಗಳು, ಮಿಂಚು, ಭೂಕಂಪವು ಉಂಟಾದವು. [PE]
6. {#1ಏಳು ತುತ್ತೂರಿಗಳು }
7. [PS]ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. [PE]
2. [PS]ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು [* ಯೋವೇ. 2:30. ]ರಕ್ತ ಮಿಶ್ರಿತವಾದ [† ವಿಮೋ 9:23, 24; ಕೀರ್ತ 18:12, 13; ಯೆರೆ 38:22: ]ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ [‡ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ]ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. [§ ಯೆಶಾ 2:13; ಪ್ರಕ 9:4: ]ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. [PE][PS]ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ [* ಯೆರೆ 51:25; ಮಾರ್ಕ 11:23: ]ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ [† ಪ್ರಕ 11:6; ವಿಮೋ 7:17, 19 ]ರಕ್ತವಾಯಿತು.
9. [‡ ಪ್ರಕ 16:3; ವಿಮೋ 7:20, 21: ]ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು [§ ಯೆಶಾ 2:16: ]ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು. [PE]
10. [PS]ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ [* ಪ್ರಕ 9:1; ಯೆಶಾ 14:12: ]ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ [† ಪ್ರಕ 14:7; 16:4: ]ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.
11. ಆ ನಕ್ಷತ್ರದ ಹೆಸರು [‡ ಕಹಿಯಾದ ಒಂದು ಜಾತಿಯ ಸಸ್ಯ. ಔಷಧಗಳ ತಯಾರಿಕೆಗೆ ಬಳಸುವ ಸಸಿ ಅಥವಾ ಗಿಡ. ]ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ [§ ಧರ್ಮೋ 29:18; ಯೆರೆ 9:15; 3:15: ]ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ [* ವಿಮೋ 15:23: ]ನೀರು ಕಹಿಯಾದ್ದರಿಂದ ಅನೇಕರು ಸತ್ತುಹೋದರು. [PE]
12.
10. [PS]ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ [† ವಿಮೋ 10:21-23; ಯೆಶಾ 13:10; 30. 26; ಪ್ರಕ 8:10: ]ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. [PE][PS]ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ [‡ ಪ್ರಕ 9:12; 11:14: ]ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು. [PE]