1. [PS]ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ [* ಅಥವಾ, ನಕ್ಷತ್ರದವನೊಬ್ಬನನ್ನು; ಪ್ರಕ 8:10; ಯೆಶಾ 14:12; ಲೂಕ 10:18; ಪ್ರಕ 12:9: ]ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ [† ಪ್ರಕ 9:2, 11; 11:7; 17:8; 20:1, 3. ಅಧೋಲೋಕವೆಂಬ ಅಭಿಪ್ರಾಯವುಳ್ಳ ಮೂಲದಲ್ಲಿನ ಪದವು ಲೂಕ 8:31; ರೋಮಾ. 10:7 ಈ ವಚನಗಳಲ್ಲಿಯೂ ಉಪಯೋಗಿಸಲ್ಪಟ್ಟಿದೆ. ]ಅಧೋಲೋಕಕ್ಕೆ ಹೋಗುವ [‡ ಅಗಾಧ ಸ್ಥಳ, ಅಂಧಕಾರದ ಸ್ಥಳ. ]ಕೂಪದ [§ ಪ್ರಕ 1:18: ]ಬೀಗದ ಕೈ ಕೊಡಲ್ಪಟ್ಟಿತು.
2. ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ [* ಯೆಶಾ 34:10: ]ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.
3. ಹೊಗೆಯೊಳಗಿಂದ [† ವಿಮೋ 10:4, 5, 12, 15; ಯೋವೇ. 2:2: ]ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.
4. [‡ ಪ್ರಕ 8:7: ]ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, [§ ಪ್ರಕ 7:2, 3; ಯೆಹೆ. 9:4: ]ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
5. ಅವರನ್ನು ಕೊಲ್ಲದೆ [* ವ. 10: ]ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು. ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು.
6. ಆ ಕಾಲದಲ್ಲಿ [† ಯೋಬ. 3:21; 7:15, 16; ಯೆರೆ 8:3: ]ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, [‡ ಪ್ರಕ 6:16: ]ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು. [PE]
7. [PS] [§ ಯೋವೇ. 2:4-7: ]ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. [* ನಹೂ. 3:17: ]ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, [† ದಾನಿ. 7:8: ]ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು.
8. ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ [‡ ಯೋವೇ. 1:6: ]ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.
9. ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. [§ ಯೋವೇ. 2:5: ]ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.
10. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ, ಕೊಂಡಿಗಳೂ ಇದ್ದವು. ಮನುಷ್ಯರನ್ನು [* ವ. 5: ]ಐದು ತಿಂಗಳುಗಳವರೆಗೂ ಪೀಡಿಸುವ ಸಾಮರ್ಥ್ಯವು ಅವುಗಳ ಬಾಲಗಳಲ್ಲಿಯೇ ಇರುವುದು.
11. ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ [† ಯೋಬ. 26:6: ]ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ [‡ ಅಂದರೆ, ನಾಶ ಮಾಡುವವನು, ಸಂಹಾರಕನು. ]ಅಪೊಲ್ಲುವೋನನೆಂತಲೂ ಹೆಸರುಂಟು. [PE]
12.
8. [PS] [§ ಪ್ರಕ 8:13; 11:14: ]ಮೊದಲನೆಯ ವಿಪತ್ತು ಕಳೆದು ಹೋಯಿತು. ಇಗೋ, ಇನ್ನೂ ಎರಡು ವಿಪತ್ತುಗಳು ಅದರ ಬೆನ್ನಹಿಂದೆಯೇ ಬಂದವು. [PE][PS]ಆರನೆಯ ದೇವದೂತನು ತುತ್ತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ಯಜ್ಞವೇದಿಯ [* ವಿಮೋ 30:3. ಪಾಠಾಂತರ: ನಾಲ್ಕು ಕೊಂಬುಗಳಿಂದ. ]ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
14. ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, [† ಪ್ರಕ 16:12: ]“ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ [‡ ಪ್ರಕ 7:1: ]ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.
15. ಆಗ [§ ಪ್ರಕ 8:7: ]ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರಮಾಡುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಿದ್ದ ಆ ನಾಲ್ಕು ಮಂದಿ ದೇವದೂತರನ್ನು ಬಿಡುಗಡೆ ಮಾಡಲಾಯಿತು.
16. ಕುದುರೆ ದಂಡಿನವರ ಸಂಖ್ಯೆಯು [* ಕೀರ್ತ 68:17; ದಾನಿ. 7:10: ]ಇಪ್ಪತ್ತು ಕೋಟಿ ಎಂದು [† ಪ್ರಕ 7:4: ]ನನಗೆ ಕೇಳಿಸಿತು.
17. ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು [‡ 1ಪೂರ್ವ 12:8; ಯೆಶಾ 5:28, 29: ]ಸಿಂಹಗಳ ತಲೆಗಳಂತಿದ್ದವು.
18. ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ [§ ಪ್ರಕ 8:7: ]ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.
19. ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.
20. ಉಪದ್ರವಗಳಿಂದ ಸಾಯದೆ ಉಳಿದ ಜನರು [* ಧರ್ಮೋ 31:29; ಯೆರೆ 1:16; 25:14: ]ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು [† ಪ್ರಕ 2:21: ]ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ [‡ 1 ಕೊರಿ 10:20: ] ಪೂಜೆಯನ್ನೂ [§ ಕೀರ್ತ 115:4-7; 135:15-17; ದಾನಿ. 5:4, 23: ]ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
21. ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, [* ಪ್ರಕ 21:8; 22:15; ಗಲಾ. 5:20: ]ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ. [PE]