ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ರೋಮಾಪುರದವರಿಗೆ
1. {#1ದೇವರು ಇಸ್ರಾಯೇಲ್ಯರಲ್ಲಿ ಎಲ್ಲರನ್ನೂ ತಳ್ಳಿಬಿಡಲಿಲ್ಲ } [PS]ಹಾಗಾದರೆ [* ಯೆರೆ 31:7, 33:24 ]ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. [† 2 ಕೊರಿ 11:22, ಫಿಲಿ. 3:5 ]ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2. [‡ ಕೀರ್ತ 94:14, 1 ಸಮು 12:22 ]ದೇವರು ತಾನು [§ ರೋಮಾ. 8:29 ]ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3. ಅವನು ದೇವರ ಮುಂದೆ, [* 1 ಅರಸು. 19:10,14,18 ]“ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
4. ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
5. ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ [† ರೋಮಾ. 9:27 ]ಒಂದು ಭಾಗವು ಉಳಿದಿದ್ದಾರೆ.
6. [‡ ರೋಮಾ. 4:4 ]ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
7. ಇದರಿಂದ ತಿಳಿಯತಕ್ಕದ್ದೇನು? [§ ರೋಮಾ. 9:31 ]ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. [* ರೋಮಾ. 11:25 ]ಉಳಿದವರು ಮೊಂಡರಾದರು.
8. [† ಯೆಶಾ 29:10, ಧರ್ಮೋ 29:4, ಮತ್ತಾ 13:14 ]“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9. ಇದಲ್ಲದೆ [‡ ಕೀರ್ತ 69:22-23 ]“ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
10. ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ. [PE]
11. {#1ದೇವರು ಇಸ್ರಾಯೇಲ್ಯರನ್ನು ತಳ್ಳಿದ್ದು ಶಾಶ್ವತವಲ್ಲ } [PS]ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು [§ ಅ. ಕೃ. 28:28 ]ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
12. ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
13. ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, [* ರೋಮಾ. 15:16, ಅ. ಕೃ. 26:17-18, 9:15 ]ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
14. ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ [† 1 ಕೊರಿ 9:22 ]ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15. ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ [‡ ರೋಮಾ. 5:11 ]ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
16. [§ ಅರಣ್ಯ 15:18-21 ]ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
17. ಆದರೆ [* ಯೆರೆ 11:16; ಯೋಹಾ 15:2 ]ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
18. ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
19. ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
20. ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. [† 1 ಕೊರಿ 10:12, 2 ಕೊರಿ 1:24 ]ನೀನು ನಿಂತಿರುವುದು ನಂಬಿಕೆಯಿಂದಲೇ.
21. [‡ ರೋಮಾ. 12:3,16,; 1 ತಿಮೊ. 6:17 ]ಗರ್ವಪಡಬೇಡ, [§ ಫಿಲಿ. 2:12 ]ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
22. ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, [* 1 ಕೊರಿ 15:2, ಇಬ್ರಿ. 3:6,14 ]ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. [† ಯೋಹಾ 15:2 ]ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23. ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24. ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. [PE]
25. {#1ಸರ್ವ ಇಸ್ರಾಯೇಲ್ಯರಿಗೆ ರಕ್ಷಣೆ } [PS]ಸಹೋದರರೇ, [‡ ರೋಮಾ. 12:16 ]ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ [§ 2 ಕೊರಿ 3:14, ರೋಮಾ. 11:7 ]ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26. ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ [* ಯೆಶಾ 59:20-21, 27:9, ಯೆರೆ 31:31-34 ]ಬಿಡಿಸುವವನು [† ಕೀರ್ತ 14:7, 53:6 ]“ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27. ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28. ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29. ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ [‡ 2 ಕೊರಿ 7:10 ]ಮನಸ್ಸು ಬದಲಾಯಿಸುವವನಲ್ಲ.
30. ಯಾವ ಪ್ರಕಾರ ನೀವು [§ ಎಫೆ 2:2, 3:11-13 ]ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31. ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32. ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು [* ರೋಮಾ. 3:9 ]ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.
33. ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. [† ಧರ್ಮೋ 29:29, ಯೋಬ. 11:7 ]ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
34. [‡ ಯೆಶಾ 40:13, 1 ಕೊರಿ 2:16 ]“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? [§ ಯೋಬ. 36:22-23 ]ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
35. [* ಯೋಬ. 35:7, 41:11 ]ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
36. [† 1 ಕೊರಿ 8:6, 11:12, ಕೊಲೊ 1:16 ]ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. [‡ ರೋಮಾ. 16:27, ಎಫೆ 3:21, ಫಿಲಿ. 4:20, ತಿಮೊ. 1:17 ]ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. [PE]
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 16
1 2
3 4 5 6 7 8 9 10 11 12 13 14 15 16
ದೇವರು ಇಸ್ರಾಯೇಲ್ಯರಲ್ಲಿ ಎಲ್ಲರನ್ನೂ ತಳ್ಳಿಬಿಡಲಿಲ್ಲ 1 ಹಾಗಾದರೆ * ಯೆರೆ 31:7, 33:24 ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. † 2 ಕೊರಿ 11:22, ಫಿಲಿ. 3:5 ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ. 2 ಕೀರ್ತ 94:14, 1 ಸಮು 12:22 ದೇವರು ತಾನು § ರೋಮಾ. 8:29 ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ? 3 ಅವನು ದೇವರ ಮುಂದೆ, * 1 ಅರಸು. 19:10,14,18 “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ. 4 ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ. 5 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ರೋಮಾ. 9:27 ಒಂದು ಭಾಗವು ಉಳಿದಿದ್ದಾರೆ. 6 ರೋಮಾ. 4:4 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ. 7 ಇದರಿಂದ ತಿಳಿಯತಕ್ಕದ್ದೇನು? § ರೋಮಾ. 9:31 ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. * ರೋಮಾ. 11:25 ಉಳಿದವರು ಮೊಂಡರಾದರು. 8 ಯೆಶಾ 29:10, ಧರ್ಮೋ 29:4, ಮತ್ತಾ 13:14 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು. 9 ಇದಲ್ಲದೆ ಕೀರ್ತ 69:22-23 “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ; 10 ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ. ದೇವರು ಇಸ್ರಾಯೇಲ್ಯರನ್ನು ತಳ್ಳಿದ್ದು ಶಾಶ್ವತವಲ್ಲ 11 ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು § ಅ. ಕೃ. 28:28 ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ. 12 ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು. 13 ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, * ರೋಮಾ. 15:16, ಅ. ಕೃ. 26:17-18, 9:15 ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ. 14 ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ 1 ಕೊರಿ 9:22 ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು. 15 ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ರೋಮಾ. 5:11 ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ. 16 § ಅರಣ್ಯ 15:18-21 ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ. 17 ಆದರೆ * ಯೆರೆ 11:16; ಯೋಹಾ 15:2 ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ. 18 ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ. 19 ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು. 20 ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. 1 ಕೊರಿ 10:12, 2 ಕೊರಿ 1:24 ನೀನು ನಿಂತಿರುವುದು ನಂಬಿಕೆಯಿಂದಲೇ. 21 ರೋಮಾ. 12:3,16,; 1 ತಿಮೊ. 6:17 ಗರ್ವಪಡಬೇಡ, § ಫಿಲಿ. 2:12 ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ. 22 ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, * 1 ಕೊರಿ 15:2, ಇಬ್ರಿ. 3:6,14 ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. † ಯೋಹಾ 15:2 ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು. 23 ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ. 24 ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. ಸರ್ವ ಇಸ್ರಾಯೇಲ್ಯರಿಗೆ ರಕ್ಷಣೆ 25 ಸಹೋದರರೇ, ರೋಮಾ. 12:16 ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ § 2 ಕೊರಿ 3:14, ರೋಮಾ. 11:7 ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು. 26 ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ * ಯೆಶಾ 59:20-21, 27:9, ಯೆರೆ 31:31-34 ಬಿಡಿಸುವವನು † ಕೀರ್ತ 14:7, 53:6 “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು. 27 ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ. 28 ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ. 29 ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ 2 ಕೊರಿ 7:10 ಮನಸ್ಸು ಬದಲಾಯಿಸುವವನಲ್ಲ. 30 ಯಾವ ಪ್ರಕಾರ ನೀವು § ಎಫೆ 2:2, 3:11-13 ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ, 31 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು. 32 ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು * ರೋಮಾ. 3:9 ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. 33 ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಧರ್ಮೋ 29:29, ಯೋಬ. 11:7 ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ. 34 ಯೆಶಾ 40:13, 1 ಕೊರಿ 2:16 “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? § ಯೋಬ. 36:22-23 ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು? 35 * ಯೋಬ. 35:7, 41:11 ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?” 36 1 ಕೊರಿ 8:6, 11:12, ಕೊಲೊ 1:16 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ‡ ರೋಮಾ. 16:27, ಎಫೆ 3:21, ಫಿಲಿ. 4:20, ತಿಮೊ. 1:17 ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 11 / 16
1 2
3 4 5 6 7 8 9 10 11 12 13 14 15 16
×

Alert

×

Kannada Letters Keypad References