1. {ದೇವರು ಇಸ್ರಾಯೇಲ್ಯರಲ್ಲಿ ಎಲ್ಲರನ್ನೂ ತಳ್ಳಿಬಿಡಲಿಲ್ಲ} PS ಹಾಗಾದರೆ * ಯೆರೆ 31:7, 33:24 ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. † 2 ಕೊರಿ 11:22, ಫಿಲಿ. 3:5 ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
|
2. ‡ ಕೀರ್ತ 94:14, 1 ಸಮು 12:22 ದೇವರು ತಾನು § ರೋಮಾ. 8:29 ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
|
3. ಅವನು ದೇವರ ಮುಂದೆ, * 1 ಅರಸು. 19:10,14,18 “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
|
4. ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
|
6. ‡ ರೋಮಾ. 4:4 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
|
7. ಇದರಿಂದ ತಿಳಿಯತಕ್ಕದ್ದೇನು? § ರೋಮಾ. 9:31 ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. * ರೋಮಾ. 11:25 ಉಳಿದವರು ಮೊಂಡರಾದರು.
|
8. † ಯೆಶಾ 29:10, ಧರ್ಮೋ 29:4, ಮತ್ತಾ 13:14 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
|
10. ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ. PS
|
11. {ದೇವರು ಇಸ್ರಾಯೇಲ್ಯರನ್ನು ತಳ್ಳಿದ್ದು ಶಾಶ್ವತವಲ್ಲ} PS ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು § ಅ. ಕೃ. 28:28 ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
|
12. ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
|
13. ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, * ರೋಮಾ. 15:16, ಅ. ಕೃ. 26:17-18, 9:15 ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
|
14. ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ † 1 ಕೊರಿ 9:22 ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
|
15. ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ‡ ರೋಮಾ. 5:11 ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
|
16. § ಅರಣ್ಯ 15:18-21 ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
|
17. ಆದರೆ * ಯೆರೆ 11:16; ಯೋಹಾ 15:2 ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
|
19. ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
|
20. ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. † 1 ಕೊರಿ 10:12, 2 ಕೊರಿ 1:24 ನೀನು ನಿಂತಿರುವುದು ನಂಬಿಕೆಯಿಂದಲೇ.
|
21. ‡ ರೋಮಾ. 12:3,16,; 1 ತಿಮೊ. 6:17 ಗರ್ವಪಡಬೇಡ, § ಫಿಲಿ. 2:12 ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
|
22. ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, * 1 ಕೊರಿ 15:2, ಇಬ್ರಿ. 3:6,14 ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. † ಯೋಹಾ 15:2 ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
|
23. ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
|
24. ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ. PS
|
25. {ಸರ್ವ ಇಸ್ರಾಯೇಲ್ಯರಿಗೆ ರಕ್ಷಣೆ} PS ಸಹೋದರರೇ, ‡ ರೋಮಾ. 12:16 ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ § 2 ಕೊರಿ 3:14, ರೋಮಾ. 11:7 ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
|
26. ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ * ಯೆಶಾ 59:20-21, 27:9, ಯೆರೆ 31:31-34 ಬಿಡಿಸುವವನು † ಕೀರ್ತ 14:7, 53:6 “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
|
28. ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
|
30. ಯಾವ ಪ್ರಕಾರ ನೀವು § ಎಫೆ 2:2, 3:11-13 ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
|
32. ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು * ರೋಮಾ. 3:9 ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.
|
33. ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. † ಧರ್ಮೋ 29:29, ಯೋಬ. 11:7 ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
|
34. ‡ ಯೆಶಾ 40:13, 1 ಕೊರಿ 2:16 “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? § ಯೋಬ. 36:22-23 ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
|
36. † 1 ಕೊರಿ 8:6, 11:12, ಕೊಲೊ 1:16 ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ‡ ರೋಮಾ. 16:27, ಎಫೆ 3:21, ಫಿಲಿ. 4:20, ತಿಮೊ. 1:17 ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. PE
|