ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ರೋಮಾಪುರದವರಿಗೆ
1. {#1ದೇವಜನರು ನಡೆದುಕೊಳ್ಳಬೇಕಾದ ರೀತಿ } [PS]ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, [* ರೋಮಾ. 6:13,16,19; 1 ಕೊರಿ 6:20 ]ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ [† ಪವಿತ್ರವಾಗಿಯೂ ]ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2. [‡ 1 ಪೇತ್ರ 1:14; 1 ಯೋಹಾ 2:15 ]ಇಹಲೋಕದ ನಡವಳಿಕೆಯನ್ನು ಅನುಸರಿಸದೆ [§ ತೀತ 3:5; ಎಫೆ 4:23; ಕೊಲೊ 3:10 ]ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ [* 1 ಥೆಸ. 4:3 ]ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. [PE]
3. [PS]ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ [† ರೋಮಾ. 11:20; 12:16 ]ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ [‡ 1 ಕೊರಿ 7:17; ಎಫೆ 4:7 ]ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
4. ಯಾಕೆಂದರೆ [§ 1 ಕೊರಿ 12:12-14; ಎಫೆ 4:4,16 ]ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5. ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ [* 1 ಕೊರಿ 12:20 ಎಫೆ 4:4,12 ]ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
6. [† 1 ಕೊರಿ 12:4,7-11; 7:7; 1 ಪೇತ್ರ 4:10,11 ]ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. [‡ 1 ಕೊರಿ 12:10 ]ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7. [§ ಅ. ಕೃ. 6:1 ]ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8. ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. [* 2 ಕೊರಿ 8:2; 9:7,11,13 ]ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. [† 1 ತಿಮೊ. 5:17 ]ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. [PE]
9. [PS] [‡ 2 ಕೊರಿ 6:6; 1 ತಿಮೊ. 1:5; 1 ಪೇತ್ರ 1:22 ]ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. [§ ಕೀರ್ತ 97:10; ಅಮೋ. 5:15; 1 ಥೆಸ. 5:21,22 ]ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10. [* ಇಬ್ರಿ. 13:1 ]ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. [† ರೋಮಾ. 13:7; ಫಿಲಿ. 2:3 ]ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
11. ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ [‡ ಅ. ಕೃ. 18:25 ]ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12. [§ ರೋಮಾ. 5:2 ]ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13. ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
14. [* ಮತ್ತಾ 5:44; 1 ಪೇತ್ರ 3:9 ]ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15. [† 1 ಕೊರಿ 12:26 ]ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
16. [‡ ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2 ]ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ [§ ರೋಮಾ. 12:3; ಕೀರ್ತ 131:1; ಯೆರೆ 45:5 ]ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. [* ರೋಮಾ. 11:25 ]ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. [PE]
17. [PS] [† ಜ್ಞಾ. 20:22; ಮತ್ತಾ 5:39; 1 ಥೆಸ. 5:15 ]ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. [‡ 2 ಕೊರಿ 8:21 ]ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
18. ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ [§ ಮಾರ್ಕ 9:50 ]ಎಲ್ಲರ ಸಂಗಡ ಸಮಾಧಾನದಿಂದಿರಿ.
19. ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ [* ಧರ್ಮೋ 32:35; ಇಬ್ರಿ. 10:30 ]“ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
20. ಹಾಗಾದರೆ [† ಜ್ಞಾ. 25:21,22; ಲೂಕ 6:27 ]“ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು” [‡ ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ ].
21. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ. [PE]
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 16
1 2 3
4 5 6 7 8 9 10 11 12 13 14 15 16
ದೇವಜನರು ನಡೆದುಕೊಳ್ಳಬೇಕಾದ ರೀತಿ 1 ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, * ರೋಮಾ. 6:13,16,19; 1 ಕೊರಿ 6:20 ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ † ಪವಿತ್ರವಾಗಿಯೂ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು. 2 1 ಪೇತ್ರ 1:14; 1 ಯೋಹಾ 2:15 ಇಹಲೋಕದ ನಡವಳಿಕೆಯನ್ನು ಅನುಸರಿಸದೆ § ತೀತ 3:5; ಎಫೆ 4:23; ಕೊಲೊ 3:10 ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ * 1 ಥೆಸ. 4:3 ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ. 3 ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ರೋಮಾ. 11:20; 12:16 ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ‡ 1 ಕೊರಿ 7:17; ಎಫೆ 4:7 ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು. 4 ಯಾಕೆಂದರೆ § 1 ಕೊರಿ 12:12-14; ಎಫೆ 4:4,16 ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ 5 ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ * 1 ಕೊರಿ 12:20 ಎಫೆ 4:4,12 ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ. 6 1 ಕೊರಿ 12:4,7-11; 7:7; 1 ಪೇತ್ರ 4:10,11 ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ‡ 1 ಕೊರಿ 12:10 ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ. 7 § ಅ. ಕೃ. 6:1 ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ. 8 ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. * 2 ಕೊರಿ 8:2; 9:7,11,13 ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. † 1 ತಿಮೊ. 5:17 ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ. 9 2 ಕೊರಿ 6:6; 1 ತಿಮೊ. 1:5; 1 ಪೇತ್ರ 1:22 ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. § ಕೀರ್ತ 97:10; ಅಮೋ. 5:15; 1 ಥೆಸ. 5:21,22 ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. 10 * ಇಬ್ರಿ. 13:1 ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. † ರೋಮಾ. 13:7; ಫಿಲಿ. 2:3 ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. 11 ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಅ. ಕೃ. 18:25 ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ. 12 § ರೋಮಾ. 5:2 ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ. 13 ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ. 14 * ಮತ್ತಾ 5:44; 1 ಪೇತ್ರ 3:9 ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ. 15 1 ಕೊರಿ 12:26 ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ. 16 ರೋಮಾ. 15:5; 2 ಕೊರಿ 13:11; ಫಿಲಿ. 2:2; 4:2 ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ § ರೋಮಾ. 12:3; ಕೀರ್ತ 131:1; ಯೆರೆ 45:5 ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. * ರೋಮಾ. 11:25 ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ. 17 ಜ್ಞಾ. 20:22; ಮತ್ತಾ 5:39; 1 ಥೆಸ. 5:15 ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ‡ 2 ಕೊರಿ 8:21 ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ. 18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ § ಮಾರ್ಕ 9:50 ಎಲ್ಲರ ಸಂಗಡ ಸಮಾಧಾನದಿಂದಿರಿ. 19 ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ * ಧರ್ಮೋ 32:35; ಇಬ್ರಿ. 10:30 “ ‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ. 20 ಹಾಗಾದರೆ ಜ್ಞಾ. 25:21,22; ಲೂಕ 6:27 “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು” ‡ ತನ್ನ ತಪ್ಪಿನ ಅರಿವು ಅವನಿಗೆ ಆಗುವಂತೆ . 21 ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.
ಒಟ್ಟು 16 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 16
1 2 3
4 5 6 7 8 9 10 11 12 13 14 15 16
×

Alert

×

Kannada Letters Keypad References