1. {#1ಇನ್ನೊಬ್ಬರಿಗೆ ತೀರ್ಪುಮಾಡಬೇಡಿರಿ [BR]1ಕೊರಿ 8-10 } [PS] [* ರೋಮಾ. 15:1; 1 ಕೊರಿ 8:9-11; 9:22 ]ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
2. ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
3. ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
4. [† ಯಾಕೋಬ 4:12 ]ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
5. [‡ ಗಲಾ. 4:10 ]ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; [§ ರೋಮಾ. 14:23 ]ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
6. ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; [* 1 ಕೊರಿ 10:30,31; 1 ತಿಮೊ. 4:3,4 ]ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
7. [† 2 ಕೊರಿ 5:15; ಗಲಾ. 2:20; 1 ಪೇತ್ರ 4:2 ]ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
8. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; [‡ ಫಿಲಿ. 1:20 ]ಬದುಕಿದರೂ ಸತ್ತರೂ ನಾವು ಕರ್ತನವರೇ.
9. ಯಾಕೆಂದರೆ [§ ಅ. ಕೃ. 10:42; ಪ್ರಕ 20:12 ]ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
10. ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? [* 2 ಕೊರಿ 5:10 ]ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
11. ಪವಿತ್ರ ಶಾಸ್ತ್ರದಲ್ಲಿ: [† ಯೆಶಾ 45:23; ಫಿಲಿ. 2:10,11 ]“ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
12. ಹೀಗಿರಲಾಗಿ [‡ ಮತ್ತಾ 12:36; 16:27; 1 ಪೇತ್ರ 4:5 ]ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13. ಆದಕಾರಣ, ಇನ್ನು ಮೇಲೆ [§ ಮತ್ತಾ 7:1 ]ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14. [* ರೋಮಾ. 14:2; 20 ]ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ [† 1 ಕೊರಿ 8:7,10 ]ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ. [PE]
15. [PS]ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ [‡ 1 ಕೊರಿ 8:11; ರೋಮಾ. 14:20 ]ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
16. ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
17. ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ [§ 1 ಕೊರಿ 6:9 ]ನೀತಿಯೂ, [* ಗಲಾ. 5:22 ]ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
18. ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
19. ಆದ್ದರಿಂದ ನಾವು [† 1 ಕೊರಿ 7:15; 2 ತಿಮೊ. 2:22; ಇಬ್ರಿ. 12:4 ]ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.
20. [‡ ರೋಮಾ. 14:15 ]ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. [§ ತೀತ 115; ರೋಮಾ. 14:14 ]ಎಲ್ಲಾ ಪದಾರ್ಥಗಳೂ ಶುದ್ಧವೇ; [* 1 ಕೊರಿ 8:9,13 ]ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
21. ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
22. ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. [† 1 ಯೋಹಾ 3:21 ]ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
23. ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. [‡ ಸಂಶಯಪಟ್ಟು ಮಾಡುವುದೆಲ್ಲಾ ಪಾಪ ]ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ. [PE]