1. {ನೆರೆಯವನ ಹಿತವನ್ನೂ ಬಯಸುವವನಾಗು} PS * ರೋಮಾ. 14:1 ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
|
2. † 1 ಕೊರಿ 10:24,33, ಫಿಲಿ. 2:4 ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
|
3. ಯಾಕೆಂದರೆ ‡ ಫಿಲಿ. 2:5,8; ಯೋಹಾ 5:30, 6:38 ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. § ಕೀರ್ತ 69:9 “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
|
4. * ರೋಮಾ. 4:23, 2 ತಿಮೊ. 3:16 ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
|
5. ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ † ರೋಮಾ. 12:16 ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
|
6. ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ‡ 2 ಕೊರಿ 1:3, ಎಫೆ 1:3, 1 ಪೇತ್ರ. 1:3 ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.
|
7. ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.
|
8. ಯಾಕೆಂದರೆ § ಮತ್ತಾ 15:24, ಯೋಹಾ 1:11, ಅ. ಕೃ. 3:26 ಕ್ರಿಸ್ತನು ಪೂರ್ವಿಕರಿಗೆ ಉಂಟಾದ * ರೋಮಾ. 4:16, 2 ಕೊರಿ 1:20 ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
|
9. † ರೋಮಾ. 3:29 ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, ‡ 2 ಸಮು 22:50, ಕೀರ್ತ 18:49 “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
|
11. ಮತ್ತೊಮ್ಮೆ, * ಕೀರ್ತ 117:1 “ಸರ್ವಜನಾಂಗಗಳೇ, ಕರ್ತನನ್ನು ಕೀರ್ತಿಸಿರಿ, ಸಮಸ್ತಪ್ರಜೆಗಳು ಆತನನ್ನು ಸಂಕೀರ್ತಿಸಲಿ” ಎಂದೂ ಬರೆದದೆ.
|
12. † ಯೆಶಾ 11:10 ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, ‡ ಯೆಶಾ 11:1, ಪ್ರಕ 5:5, 22:16 “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. § ಮತ್ತಾ 12:21 ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
|
13. ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ * ರೋಮಾ. 5:1-2, 14:17 ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. PS
|
14. {ಪೌಲನು ತನ್ನ ಹಿಂದಿನ ಕೆಲಸವನ್ನು ಸಂಕ್ಷೇಪವಾಗಿ ತಿಳಿಸಿ ತಾನು ರೋಮಾಪುರಕ್ಕೆ ಬರಬೇಕೆಂಬ ಅಭಿಪ್ರಾಯವನ್ನು ಸೂಚಿಸಿ ಸಭೆಯವರ ಪ್ರಾರ್ಥನೆ ಕೇಳಿಕೊಳ್ಳುತ್ತಾನೆ} PS ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.
|
15. (15-16) ಆದರೂ ಪ್ರಿಯರೇ, ನಿಮ್ಮನ್ನು ನೆನಪಿಸುವುದಕ್ಕಾಗಿ ಕೆಲವೊಂದು ವಿಷಯಗಳನ್ನು ಹೆಚ್ಚಾದ ಧೈರ್ಯದಿಂದ ಬರೆದಿದ್ದೇನೆ. ಯಾಕೆಂದರೆ † ರೋಮಾ. 11:13 ನಾನು ಅನ್ಯಜನರಿಗೋಸ್ಕರ ಯೇಸು ಕ್ರಿಸ್ತನ ಸೇವಕನಾಗುವುದಕ್ಕೆ ನನಗೆ ದೇವರ ಆಶೀರ್ವಾದವಾಯಿತು. ನಾನು ದೇವರ ಸುವಾರ್ತಾ ಸೇವೆಯನ್ನು ಯಾಜಕ ಸೇವೆ ಎಂಬಂತೆ ನಡಿಸಿ ‡ ಯೆಶಾ 66:20, ಫಿಲಿ. 2:17 ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ಸಮರ್ಪಕವಾಗುವಂತೆ ಯತ್ನಿಸುವವನಾಗಿದ್ದೇನೆ.
|
17. ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, § 2 ಕೊರಿ 12:12 ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.
|
18. ನಾನು ಯೆರೂಸಲೇಮ್ ಮೊದಲುಗೊಂಡು * ಅ. ಕೃ. 20:1-2 ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.
|
19. † 2 ಕೊರಿ 10:13, 15:16 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು.
|
20. ‡ ಯೆಶಾ 52:15 “ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ. PEPS
|
22. ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ * ರೋಮಾ. 15:29,32; 1:10-11; ಅ. ಕೃ. 19:21 ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
|
23. ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
|
24. † ಅ. ಕೃ. 19:21, 20:22, 21:15, 24:17 ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
|
25. ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ‡ 1 ಕೊರಿ 16:1-4, 2 ಕೊರಿ 8:1, 1:9, 2:13 ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
|
26. ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ § 1 ಕೊರಿ 9:11, ಗಲಾ. 6:6 ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
|
27. ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
|
29. ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ * ಫಿಲಿ. 1:8 ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
|
30. ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.
|