1. {ಯೆಹೂದ್ಯರಾದರೂ ಅಪರಾಧಿಗಳೇ} PS ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, * ರೋಮಾ. 1:20 ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, † ಮತ್ತಾ 7:2 ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.
|
3. ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
|
4. ಅಥವಾ ಆತನ ‡ ಎಫೆ 1:17,18; 2:4,7 ಅಪಾರವಾದ ದಯೆ, § ರೋಮಾ. 3:26 ಸಹನೆ, * ರೋಮಾ. 9:22 ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ † 2 ಪೇತ್ರ 3:9,15 ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
|
5. ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
|
6. ‡ ಯೋಬ 34:11; ಕೀರ್ತ 62:12; ಜ್ಞಾ. 24:12; ಯೆರೆ 17:10; 32:19; ಮತ್ತಾ 16:27; 2 ಕೊರಿ 5:10 ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
|
7. ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
|
8. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
|
9. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ § ಯೆಹೆ. 18:20 ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
|
10. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. * ರೋಮಾ. 1:16
|
12. ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
|
13. ‡ ಯಾಕೋಬ 1:22,23 ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
|
14. ಧರ್ಮಶಾಸ್ತ್ರವಿಲ್ಲದ ಅನ್ಯಜನರು § ರೋಮಾ. 1:19 ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
|
15. ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
|
16. * ರೋಮಾ. 16:25,26; 2 ತಿಮೊ. 2:8; ಗಲಾ. 1:11 ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ † ರೋಮಾ. 3:6; 14:10; 1 ಕೊರಿ 4:5; ಅ. ಕೃ. 10:42; 17:31; ಯೋಹಾ 5:22 ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು. PEPS
|
18. ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.
|
19. ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ‡ ಮತ್ತಾ 15:14 ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,
|
21. § ಮತ್ತಾ 23:3-28; 15:1-9 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
|
22. ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
|
23. ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
|
24. * ಯೆಶಾ 52:5; ಯೆಹೆ. 36:20 “ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ. PEPS
|
25. † ಗಲಾ. 5:3 ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.
|
26. ಹೀಗಿರಲಾಗಿ ‡ ಎಫೆ 2:11 ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?
|
27. ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.
|
28. § ರೋಮಾ. 6-8; ಗಲಾ. 6:15; ರೋಮಾ 2:17 ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಮತ್ತು ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.
|
29. ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು * ಧರ್ಮೋ 10:16; 30:6; ಯೆರೆ 4:4; ಅ. ಕೃ. 7:51; ಫಿಲಿ. 3:3; ಕೊಲೊ 2:11 ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, † 2 ಕೊರಿ 10:18 ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ. PE
|