2. ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ * ಧರ್ಮೋ 4:8, ಕೀರ್ತ 147:19-20, ಅ. ಕೃ. 7:38 ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
|
3. † ರೋಮಾ. 10:16 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
|
4. ಬದಲಾಗಿ,
‡ ಕೀರ್ತ 51:4 “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, § ಕೀರ್ತ 62:9 ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. PEPS |
5. ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. * ರೋಮಾ. 6:19, 1 ಕೊರಿ 9:8, ಗಲಾ. 3:15 ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
|
7. ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
|
8. † ರೋಮಾ. 6:1,15 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. PS
|
9. {ಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮ} PS ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ‡ ರೋಮಾ. 2:1-29 ಯೆಹೂದ್ಯರೇ ಆಗಲಿ § ರೋಮಾ. 1:18-32 ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
|
13. † ಕೀರ್ತ 5:9 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ‡ ಕೀರ್ತ 140:3 ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
|
19. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
|
20. ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. § ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. PS
|
21. {ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ} PS ಈಗಲಾದರೋ * ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17 ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ † ಅ. ಕೃ. 10:43 ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
|
22. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
|
24. § ತೀತ. 3:7 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು * ಎಫೆ 1:7, ಕೊಲೊ 1:14, ಇಬ್ರಿ. 9:15 ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
|
25. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
|
26. ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. PEPS
|
27. † ರೋಮಾ. 2:17,23; 1 ಕೊರಿ 1:29-31, ಎಫೆ 2:9 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
|
28. ‡ ಈ ವಚನದೊಂದಿಗೆ ಯಾಕೋಬ 2:18 ಹೋಲಿಸಿ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
|
29. § ರೋಮಾ. 9:24, 10:12, 15:9, ಗಲಾ. 3:28 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು * ಗಲಾ. 3:20 ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
|
30. ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ † ಗಲಾ. 3:8 ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
|
31. ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ. PE
|