ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
1. ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
2. ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ [* ಧರ್ಮೋ 4:8, ಕೀರ್ತ 147:19-20, ಅ. ಕೃ. 7:38] ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
3. [† ರೋಮಾ. 10:16] ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
4. ಬದಲಾಗಿ, [QBR] [‡ ಕೀರ್ತ 51:4] “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, [QBR] ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, [§ ಕೀರ್ತ 62:9] ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. [PE][PS]
5. ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. [* ರೋಮಾ. 6:19, 1 ಕೊರಿ 9:8, ಗಲಾ. 3:15] ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
6. ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
7. ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
8. [† ರೋಮಾ. 6:1,15] “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. [PS]
9. {ಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮ} [PS] ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. [‡ ರೋಮಾ. 2:1-29] ಯೆಹೂದ್ಯರೇ ಆಗಲಿ [§ ರೋಮಾ. 1:18-32] ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
10. ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, [QBR] [* ಕೀರ್ತ 14:1-3, 53:1-3] “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; [QBR]
11. ತಿಳಿವಳಿಕೆಯುಳ್ಳವನು ಇಲ್ಲ, [QBR] ದೇವರನ್ನು ಹುಡುಕುವವನು ಇಲ್ಲ. [QBR]
12. ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. [QBR]
13. [† ಕೀರ್ತ 5:9] ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. [‡ ಕೀರ್ತ 140:3] ಅವರ ತುಟಿಯ ಹಿಂದೆ ಹಾವಿನ ವಿಷವಿದೆ. [QBR]
14. [§ ಕೀರ್ತ 10:7] ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ. [QBR]
15. [* ಜ್ಞಾ. 1:16, ಯೆಶಾ 59:7-8] ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ. [QBR]
16. ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ. [QBR]
17. ಸಮಾಧಾನದ ಮಾರ್ಗವನ್ನೇ ಅರಿಯರು. [QBR]
18. [† ಕೀರ್ತ 36:1] ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ. [PE][PS]
19. ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. [‡ ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2] ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
20. ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. [§ ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ] ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. [PS]
21. {ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ} [PS] ಈಗಲಾದರೋ [* ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17] ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ [† ಅ. ಕೃ. 10:43] ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
22. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23. [‡ ರೋಮಾ. 3:9] ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
24. [§ ತೀತ. 3:7] ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು [* ಎಫೆ 1:7, ಕೊಲೊ 1:14, ಇಬ್ರಿ. 9:15] ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
25. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
26. ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. [PE][PS]
27. [† ರೋಮಾ. 2:17,23; 1 ಕೊರಿ 1:29-31, ಎಫೆ 2:9] ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
28. [‡ ಈ ವಚನದೊಂದಿಗೆ ಯಾಕೋಬ 2:18 ಹೋಲಿಸಿ] ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
29. [§ ರೋಮಾ. 9:24, 10:12, 15:9, ಗಲಾ. 3:28] ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು [* ಗಲಾ. 3:20] ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
30. ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ [† ಗಲಾ. 3:8] ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
31. ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ. [PE]

Notes

No Verse Added

Total 16 Chapters, Current Chapter 3 of Total Chapters 16
1 2 3 4 5 6 7 8 9 10 11
ರೋಮಾಪುರದವರಿಗೆ 3:2
1. ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
2. ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ * ಧರ್ಮೋ 4:8, ಕೀರ್ತ 147:19-20, ಅ. ಕೃ. 7:38 ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
3. ರೋಮಾ. 10:16 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
4. ಬದಲಾಗಿ,
ಕೀರ್ತ 51:4 “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು,
ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, § ಕೀರ್ತ 62:9 ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ. PEPS
5. ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. * ರೋಮಾ. 6:19, 1 ಕೊರಿ 9:8, ಗಲಾ. 3:15 ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
6. ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
7. ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
8. ರೋಮಾ. 6:1,15 “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು. PS
9. {ಮನುಷ್ಯರೆಲ್ಲರು ಅಪರಾಧಿಗಳೆಂಬುದಕ್ಕೆ ಶಾಸ್ತ್ರನಿಯಮ} PS ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ರೋಮಾ. 2:1-29 ಯೆಹೂದ್ಯರೇ ಆಗಲಿ § ರೋಮಾ. 1:18-32 ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
10. ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ,
* ಕೀರ್ತ 14:1-3, 53:1-3 “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
11. ತಿಳಿವಳಿಕೆಯುಳ್ಳವನು ಇಲ್ಲ,
ದೇವರನ್ನು ಹುಡುಕುವವನು ಇಲ್ಲ.
12. ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
13. ಕೀರ್ತ 5:9 ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಕೀರ್ತ 140:3 ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
14. § ಕೀರ್ತ 10:7 ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
15. * ಜ್ಞಾ. 1:16, ಯೆಶಾ 59:7-8 ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
16. ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
17. ಸಮಾಧಾನದ ಮಾರ್ಗವನ್ನೇ ಅರಿಯರು.
18. ಕೀರ್ತ 36:1 ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ. PEPS
19. ಧರ್ಮಶಾಸ್ತ್ರದ ನುಡಿಗಳೆಲ್ಲವು ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2 ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
20. ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. § ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ. PS
21. {ಎಲ್ಲಾ ಮನುಷ್ಯರು ನೀತಿವಂತರಾಗುವುದಕ್ಕೆ ಯೇಸು ಕ್ರಿಸ್ತನನ್ನು ನಂಬುವುದೇ ಮಾರ್ಗ} PS ಈಗಲಾದರೋ * ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17 ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಅ. ಕೃ. 10:43 ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
22. ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
23. ರೋಮಾ. 3:9 ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
24. § ತೀತ. 3:7 ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು * ಎಫೆ 1:7, ಕೊಲೊ 1:14, ಇಬ್ರಿ. 9:15 ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
25. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
26. ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು. PEPS
27. ರೋಮಾ. 2:17,23; 1 ಕೊರಿ 1:29-31, ಎಫೆ 2:9 ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
28. ವಚನದೊಂದಿಗೆ ಯಾಕೋಬ 2:18 ಹೋಲಿಸಿ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
29. § ರೋಮಾ. 9:24, 10:12, 15:9, ಗಲಾ. 3:28 ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು * ಗಲಾ. 3:20 ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
30. ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಗಲಾ. 3:8 ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
31. ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ. PE
Total 16 Chapters, Current Chapter 3 of Total Chapters 16
1 2 3 4 5 6 7 8 9 10 11
×

Alert

×

kannada Letters Keypad References