ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
1. {ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ} [PS] ಹಾಗಾದರೆ ವಂಶಾನುಕ್ರಮವಾಗಿ ನಮಗೆ [* ಯೆಶಾ 51:2; ರೋಮಾ. 4:16] ಮೂಲಪಿತೃವಾಗಿರುವ ಅಬ್ರಹಾಮನು ಈ ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
2. ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ [† 1 ಕೊರಿ 1:31] ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
3. ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, [‡ ಆದಿ 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23] “ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
4. ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ [§ ರೋಮಾ. 3:22] ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
6. ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
7. [* ಕೀರ್ತ 32:1] “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
8. [† 2 ಕೊರಿ 5:19] ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.”
9. [‡ ರೋಮಾ. 3:30] ಈ ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? [§ ರೋಮಾ. 4:3] “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
10. ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
11. ಅನಂತರ [* ಆದಿ 17:10,16] ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ [† ರೋಮಾ. 4:12,16] ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
12. ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ. [PS]
13. {ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು} [PS] [‡ ಆದಿ 17:4-6; 22:17,18] ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
14. ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
15. ಯಾಕೆಂದರೆ [§ ರೋಮಾ. 7:7; 10:25; 2 ಕೊರಿ 7:9; ಗಲಾ. 3:10] ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ [* ರೋಮಾ. 3:20; ಗಲಾ. 3:19] ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
16. ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದ [† ಗಲಾ. 3:22] ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
17. [‡ ಆದಿ 17:5] “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು [§ 1 ಕೊರಿ 1:28] ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
18. [* ಆದಿ 15:5] “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ಆ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
19. [† ಆದಿ 17:17] ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು [‡ ಇಬ್ರಿ. 11:12] ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ [§ ಆದಿ 18:11] ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
21. ದೇವರನ್ನು ಘನಪಡಿಸುವವನಾಗಿ [* ಆದಿ 18:14] ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು [† ನಂಬಿಕೆಯಿಂದಲೇ ಬಲಹೊಂದಿ] ಪೂರ್ಣದೃಢತೆಯುಳ್ಳವನಾದನು.
22. ಆದ್ದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
23. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ [‡ ರೋಮಾ. 15:4; 1 ಕೊರಿ 9:9,10; 6:11; 2 ತಿಮೊ. 3:16,17] ನಮಗೋಸ್ಕರವೂ ಬರೆದಿರುವುದು.
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ [§ ಅ. ಕೃ. 2:24] ಎಬ್ಬಿಸಿದ ದೇವರನ್ನು [* ರೋಮಾ. 10:9; 1 ಪೇತ್ರ 1:21] ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
25. [† ರೋಮಾ. 5:6,8; 8:32; ಯೆಶಾ 53:5,6; ಮತ್ತಾ 20:28; ಗಲಾ. 1:4] ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು [‡ ರೋಮಾ. 5:18] ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು. [PE]

Notes

No Verse Added

Total 16 Chapters, Current Chapter 4 of Total Chapters 16
1 2 3 4 5 6 7 8 9 10 11 12
ರೋಮಾಪುರದವರಿಗೆ 4:6
1. {ಅಬ್ರಹಾಮನು ನಂಬಿಕೆಯಿಂದಲೇ ನೀತಿವಂತನಾದನೆಂಬ ವಾದ} PS ಹಾಗಾದರೆ ವಂಶಾನುಕ್ರಮವಾಗಿ ನಮಗೆ * ಯೆಶಾ 51:2; ರೋಮಾ. 4:16 ಮೂಲಪಿತೃವಾಗಿರುವ ಅಬ್ರಹಾಮನು ವಿಷಯದಲ್ಲಿ ಏನು ಪಡೆದುಕೊಂಡನೆಂದು ಹೇಳಬೇಕು?
2. ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ 1 ಕೊರಿ 1:31 ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.
3. ಇದರ ವಿಷಯದಲ್ಲಿ ಧರ್ಮಶಾಸ್ತ್ರವು ಹೇಳುವುದನ್ನು ಆಲೋಚಿಸಿರಿ, ಆದಿ 15:6; ರೋಮಾ. 4:9, 22; ಗಲಾ. 3:6; ಯಾಕೋಬ 2:23 “ಅಬ್ರಹಾಮನು ದೇವರನ್ನು ನಂಬಿದನು; ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು” ಎಂದು ಹೇಳುತ್ತದೆ.
4. ಕೆಲಸ ಮಾಡಿದವನಿಗೆ ಬರುವ ಕೂಲಿಯು ಕೃಪೆಯಿಂದ ದೊರಕುವಂಥದೆಂದು ಎಣಿಕೆಯಾಗುವುದಿಲ್ಲ; ಅದು ಅವನಿಗೆ ಸಲ್ಲತಕ್ಕದ್ದೇ ಎಂದು ಎಣಿಕೆಯಾಗುವುದು.
5. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ § ರೋಮಾ. 3:22 ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.
6. ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
7. * ಕೀರ್ತ 32:1 “ಯಾರ ಅಪರಾಧಗಳು ಪರಿಹಾರವಾಗಿದೆಯೋ, ಯಾರ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಅವರೇ ಧನ್ಯರು.
8. 2 ಕೊರಿ 5:19 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಮನುಷ್ಯನೇ ಧನ್ಯನು.”
9. ರೋಮಾ. 3:30 ಶುಭವು ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೆ ಸಹ ಉಂಟೋ? § ರೋಮಾ. 4:3 “ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ನಾವು ಹೇಳುತ್ತೇವೆ.
10. ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.
11. ಅನಂತರ * ಆದಿ 17:10,16 ಸುನ್ನತಿಯನ್ನು, ಮೊದಲೇ ಅವನಿಗಿದ್ದ ನಂಬಿಕೆಯ ಗುರುತಾಗಿಯೂ, ಮುದ್ರೆಯಾಗಿಯೂ ಹೊಂದಿದನು. ಹೀಗಿರುವುದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾಗಿದಾಗ್ಯೂ ರೋಮಾ. 4:12,16 ಮೂಲಪಿತೃವಾದನು; ಇದರಿಂದ ಅವರು ನೀತಿವಂತರೆಂದು ಎಣಿಸಲ್ಪಟ್ಟರು.
12. ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ. PS
13. {ನಂಬಿಕೆಯಿಂದ ವಾಗ್ದಾನವನ್ನು ಹೊಂದಿದ್ದು} PS ಆದಿ 17:4-6; 22:17,18 ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ; ನಂಬಿಕೆಯಿಂದ ಬರುವ ನೀತಿಯಾಗಿದೆ.
14. ಧರ್ಮಶಾಸ್ತ್ರವನ್ನು ಅನುಸರಿಸುವವರು ಲೋಕಕ್ಕೆ ಬಾಧ್ಯರಾಗಿದ್ದರೆ ನಂಬಿಕೆಯು ವ್ಯರ್ಥವಾಯಿತು, ವಾಗ್ದಾನವು ನಿರರ್ಥಕವಾಯಿತು.
15. ಯಾಕೆಂದರೆ § ರೋಮಾ. 7:7; 10:25; 2 ಕೊರಿ 7:9; ಗಲಾ. 3:10 ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ * ರೋಮಾ. 3:20; ಗಲಾ. 3:19 ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
16. ಆದಕಾರಣ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ವಾಗ್ದಾನವು ನಮ್ಮೆಲ್ಲರ ತಂದೆಯಾದ ಗಲಾ. 3:22 ಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.
17. ಆದಿ 17:5 “ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಪಿತನಾಗಿ ನೇಮಿಸಿದ್ದೇನೆಂದು” ಶಾಸ್ತ್ರದಲ್ಲಿ ಬರೆದಿದೆಯಲ್ಲ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಮತ್ತು § 1 ಕೊರಿ 1:28 ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವನೂ ಆದ ದೇವರಲ್ಲಿ ಅಬ್ರಹಾಮನು ನಂಬಿಕೆಯಿಟ್ಟನು.
18. * ಆದಿ 15:5 “ನಿನ್ನ ಸಂತಾನವು ನಕ್ಷತ್ರಗಳಷ್ಟಾಗುವುದು” ಎಂಬುದಾಗಿ ತನಗೆ ಹೇಳಲ್ಪಟ್ಟ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ ಅಬ್ರಹಾಮನು ತಾನು ಬಹು ಜನಾಂಗಗಳಿಗೆ ಪಿತನಾಗುವೆನೆಂದು ನಿರೀಕ್ಷೆಗೆ ವಿರುದ್ಧವಾಗಿ ನಿರೀಕ್ಷಿಸಿ ನಂಬಿದನು.
19. ಆದಿ 17:17 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ಇಬ್ರಿ. 11:12 ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ § ಆದಿ 18:11 ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.
20. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.
21. ದೇವರನ್ನು ಘನಪಡಿಸುವವನಾಗಿ * ಆದಿ 18:14 ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ನಂಬಿಕೆಯಿಂದಲೇ ಬಲಹೊಂದಿ ಪೂರ್ಣದೃಢತೆಯುಳ್ಳವನಾದನು.
22. ಆದ್ದರಿಂದ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು.
23. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತೆಂಬುದು ಅವನಿಗೋಸ್ಕರ ಮಾತ್ರವಲ್ಲದೆ ರೋಮಾ. 15:4; 1 ಕೊರಿ 9:9,10; 6:11; 2 ತಿಮೊ. 3:16,17 ನಮಗೋಸ್ಕರವೂ ಬರೆದಿರುವುದು.
24. ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ § ಅ. ಕೃ. 2:24 ಎಬ್ಬಿಸಿದ ದೇವರನ್ನು * ರೋಮಾ. 10:9; 1 ಪೇತ್ರ 1:21 ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.
25. ರೋಮಾ. 5:6,8; 8:32; ಯೆಶಾ 53:5,6; ಮತ್ತಾ 20:28; ಗಲಾ. 1:4 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ರೋಮಾ. 5:18 ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು. PE
Total 16 Chapters, Current Chapter 4 of Total Chapters 16
1 2 3 4 5 6 7 8 9 10 11 12
×

Alert

×

kannada Letters Keypad References