ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
1. {ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು} [PS] ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
2. [* ರೋಮಾ. 3:8; 6:11; 7:4,6; ಗಲಾ. 2:19; ಕೊಲೊ 2:20; 3:3; 1 ಪೇತ್ರ 2:24] ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3. [† ಗಲಾ. 3:27] ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4. ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ [‡ ಕೊಲೊ 2:12] ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ [§ ರೋಮಾ. 6:9; 8:11; ಅ. ಕೃ. 2:24] ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು [* 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10] ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5. ಹೇಗೆಂದರೆ ನಾವು ಆತನ ಮರಣಕ್ಕೆ [† ಫಿಲಿ. 3:10,11] ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6. ನಮಗೆ ತಿಳಿದಿರುವಂತೆ, ನಮ್ಮ [‡ ಎಫೆ 4:22; ಕೊಲೊ 3:9] ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು [§ ಗಲಾ. 2:20; 5:24; 6:14] ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7. [* ರೋಮಾ. 6:18] ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8. ಇದಲ್ಲದೆ [† 2 ತಿಮೊ. 2:11; 2 ಕೊರಿ 4:10; 13:4] ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ [‡ ಅ. ಕೃ. 13:34; ಪ್ರಕ 1:18] ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10. [§ ಇಬ್ರಿ. 7:27] ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11. ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ [* ರೋಮಾ. 6:2] ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. [PS]
12. {ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು} [PS] ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ [† ರೋಮಾ. 12:1] ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14. ಯಾಕೆಂದರೆ [‡ ರೋಮಾ. 8:2; 12] ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು [§ ನೇಮಗಳಿಗೆ] ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15. ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು [* ರೋಮಾ. 6:1] ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ [† ರೋಮಾ. 6:20] ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
17. ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
18. [‡ ರೋಮಾ. 6:22; 8:2] ಪಾಪದಿಂದ ಬಿಡುಗಡೆಯನ್ನು ಹೊಂದಿ [§ ರೋಮಾ. 6:22] ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
19. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು [* ರೋಮಾ. 3:5] ಲೋಕದ ರೀತಿಯಾಗಿ ಮಾತನಾಡುತ್ತೇನೆ. [† ರೋಮಾ. 6:13 ] ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ [‡ ರೋಮಾ. 7:5] ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. [§ ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8] ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22. ಈಗಲಾದರೋ ನೀವು [* ರೋಮಾ. 6:18] ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ [† 1 ಕೊರಿ 7:22; 1 ಪೇತ್ರ 2:16] ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
23. ಯಾಕೆಂದರೆ [‡ ರೋಮಾ. 5:12; 2:8] ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. [PE]

Notes

No Verse Added

Total 16 Chapters, Current Chapter 6 of Total Chapters 16
1 2 3 4 5 6 7 8 9 10 11 12 13 14
15 16
ರೋಮಾಪುರದವರಿಗೆ 6:11
1. {ಸತ್ತು ಜೀವಿತನಾಗಿ ಎದ್ದ ಕ್ರಿಸ್ತನಲ್ಲಿ ಐಕ್ಯವಾದವರು} PS ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಾಗಲಿ ಎಂದು ನಾವು ಇನ್ನೂ ಪಾಪವನ್ನು ಮಾಡುತ್ತಲೇ ಇರಬೇಕೋ? ಹಾಗೆ ಎಂದಿಗೂ ಹಾಗಾಗಬಾರದು.
2. * ರೋಮಾ. 3:8; 6:11; 7:4,6; ಗಲಾ. 2:19; ಕೊಲೊ 2:20; 3:3; 1 ಪೇತ್ರ 2:24 ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?
3. ಗಲಾ. 3:27 ಕ್ರಿಸ್ತ ಯೇಸುವಿನೊಂದಿಗೆ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡವರಾದ ನಾವೆಲ್ಲರೂ ಆತನ ಮರಣದಲ್ಲಿ ಪಾಲುಗಾರರಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
4. ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಕೊಲೊ 2:12 ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ § ರೋಮಾ. 6:9; 8:11; ಅ. ಕೃ. 2:24 ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು * 2 ಕೊರಿ 5:17; ಗಲಾ. 15; ಎಫೆ 4:23,24; ಕೊಲೊ 3:10 ನೂತನ ಜೀವದಲ್ಲಿ ನಡೆದುಕೊಳ್ಳಬೇಕು.
5. ಹೇಗೆಂದರೆ ನಾವು ಆತನ ಮರಣಕ್ಕೆ ಫಿಲಿ. 3:10,11 ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.
6. ನಮಗೆ ತಿಳಿದಿರುವಂತೆ, ನಮ್ಮ ಎಫೆ 4:22; ಕೊಲೊ 3:9 ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು § ಗಲಾ. 2:20; 5:24; 6:14 ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.
7. * ರೋಮಾ. 6:18 ಸತ್ತವನು ಪಾಪದ ವಶದಿಂದ ಬಿಡುಗಡೆ ಹೊಂದಿದ್ದಾನೆ.
8. ಇದಲ್ಲದೆ 2 ತಿಮೊ. 2:11; 2 ಕೊರಿ 4:10; 13:4 ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.
9. ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಅ. ಕೃ. 13:34; ಪ್ರಕ 1:18 ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
10. § ಇಬ್ರಿ. 7:27 ಆತನು ಸತ್ತದ್ದು ಒಂದೇ ಸಾರಿ ಅದು ಪಾಪದ ಪಾಲಿಗೆ; ಆತನು ಜೀವಿಸುವುದು ದೇವರಿಗಾಗಿಯೇ,
11. ಅದೇ ಪ್ರಕಾರ ನೀವು ಸಹ ನಿಮ್ಮನ್ನು ಕ್ರಿಸ್ತ ಯೇಸುವಿನ ಐಕ್ಯದಿಂದ * ರೋಮಾ. 6:2 ಪಾಪದ ಪಾಲಿಗೆ ಸತ್ತವರೂ, ದೇವರಿಗಾಗಿ ಜೀವಿಸುವವರೂ ಎಂದು ಎಣಿಸಿಕೊಳ್ಳಿರಿ. PS
12. {ನಂಬಿದವರು ಪಾಪದ ದಾಸತ್ವದಿಂದ ಬಿಡುಗಡೆಯಾಗಿ ದೇವರಿಗೆ ದಾಸರಾಗುವರು} PS ಹೀಗಿರುವುದರಿಂದ ಸಾವಿಗೆ ಒಳಗಾಗುವ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.
13. ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ರೋಮಾ. 12:1 ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.
14. ಯಾಕೆಂದರೆ ರೋಮಾ. 8:2; 12 ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು § ನೇಮಗಳಿಗೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
15. ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು * ರೋಮಾ. 6:1 ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
16. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ರೋಮಾ. 6:20 ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ
17. ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,
18. ರೋಮಾ. 6:22; 8:2 ಪಾಪದಿಂದ ಬಿಡುಗಡೆಯನ್ನು ಹೊಂದಿ § ರೋಮಾ. 6:22 ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
19. ನಿಮ್ಮ ಶರೀರ ಭಾವದ ಬಲಹೀನತೆಯ ದೆಸೆಯಿಂದ ನಾನು * ರೋಮಾ. 3:5 ಲೋಕದ ರೀತಿಯಾಗಿ ಮಾತನಾಡುತ್ತೇನೆ. ರೋಮಾ. 6:13 ದುಷ್ಟತನವನ್ನು ಮಾಡುವುದಕ್ಕಾಗಿ ನಿಮ್ಮ ಅಂಗಗಳನ್ನು ಬಂಡುತನಕ್ಕೂ, ದುಷ್ಟತನಕ್ಕೂ ದಾಸರನ್ನಾಗಿ ಒಪ್ಪಿಸಿ ಕೊಟ್ಟಿದ್ದಂತೆಯೇ ಈಗ ಪರಿಶುದ್ಧರಾಗುವುದಕ್ಕಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಪ್ಪಿಸಿಕೊಡಿರಿ.
20. ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ.
21. ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ರೋಮಾ. 7:5 ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. § ರೋಮಾ. 1:32; 8:6, 13; ಜ್ಞಾ. 14:12; ಗಲಾ. 6:8 ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?
22. ಈಗಲಾದರೋ ನೀವು * ರೋಮಾ. 6:18 ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ 1 ಕೊರಿ 7:22; 1 ಪೇತ್ರ 2:16 ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
23. ಯಾಕೆಂದರೆ ರೋಮಾ. 5:12; 2:8 ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ. PE
Total 16 Chapters, Current Chapter 6 of Total Chapters 16
1 2 3 4 5 6 7 8 9 10 11 12 13 14
15 16
×

Alert

×

kannada Letters Keypad References