1. {ಇಸ್ರಾಯೇಲ್ಯರ ಅಪನಂಬಿಕೆಯು ಅತ್ಯಂತ ದುಃಖಕರವಾದದ್ದು} PS * 2 ಕೊರಿ 11:10; 1 ತಿಮೊ. 2:7; ಗಲಾ. 1:20 ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.
|
3. ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.
|
4. ಅವರು ಇಸ್ರಾಯೇಲಿನ ವಂಶದವರು. † ವಿಮೋ 4:22, ರೋಮಾ. 8:15 ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ‡ ಆದಿ 17:2, ಧರ್ಮೋ 29:14, ಗಲಾ. 4:24 ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ § ಧರ್ಮೋ 4:14 ಅವರಿಗೆ ಧರ್ಮಶಾಸ್ತ್ರವು, * ಇಬ್ರಿ. 9:1 ದೇವಾಲಯದಲ್ಲಿ ನಡೆಯುವ ಆರಾಧನೆಯೂ, † ಎಫೆ 2:12, ಅ. ಕೃ. 13:32 ವಾಗ್ದಾನಗಳೂ ಕೊಡಲ್ಪಟ್ಟವು.
|
5. ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ‡ ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8 ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. PS
|
6. {ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ವಾಗ್ದಾನಗಳಿಗೆ ವಿರುದ್ಧವಾದದ್ದಲ್ಲ} PS § ಗಲಾ. 4:23 ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.
|
7. ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ * ಆದಿ 21:12, ಇಬ್ರಿ 11:18 “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.
|
8. ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. † ಗಲಾ. 4:23, 28 ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
|
9. ‡ ಆದಿ 18:10; 14:17,21 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ.
|
10. ಇದು ಮಾತ್ರವಲ್ಲದೆ ರೆಬೆಕ್ಕಳು ಸಹ ನಮ್ಮ ಮೂಲಪಿತೃವಾದ ಇಸಾಕನಿಂದ ಅವಳಿ ಜವಳಿ ಮಕ್ಕಳಿಗೆ ಬಸುರಾದಾಗ ಅದರಂತೆಯೇ ಆಯಿತು.
|
11. (11-12) ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ § ಆದಿ 25:23 “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ * ರೋಮಾ. 4:17, 8:28 ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.
|
12. ಇದಕ್ಕನುಸಾರವಾಗಿ † ಮಲಾ. 1:2-3 “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ‡ ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25 ದ್ವೇಷಿಸಿದನು” ಎಂದು ಬರೆದದೆ. PS
|
13. {ದೇವರು ಇಸ್ರಾಯೇಲ್ಯರನ್ನು ತಳ್ಳಿಬಿಟ್ಟದ್ದು ಆತನ ನ್ಯಾಯಕ್ಕೆ ವಿರುದ್ಧವಾದದ್ದಲ್ಲ} PS ಹಾಗಾದರೆ ಏನು ಹೇಳೋಣ? § ಧರ್ಮೋ 32:4, 2 ಪೂರ್ವ 19:7, ಯೋಬ. 8:3, 34:10, ಕೀರ್ತ 92:15 ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.
|
14. * ವಿಮೋ 33:19 “ಯಾವನ ಮೇಲೆ ನನಗೆ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವಿದೆಯೋ ಅವನಿಗೆ ಕನಿಕರ ತೋರಿಸುವೆನು” ಎಂದು ದೇವರು ಮೋಶೆಗೆ ಹೇಳಿರುತ್ತಾನೆ.
|
15. ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
|
16. ದೇವರು ಫರೋಹನನನ್ನು ಕುರಿತು † ವಿಮೋ 9:16 “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.
|
17. ದೇವರು ‡ ವಿಮೋ 4:21, 9:12, 11:10, 14:4, ಧರ್ಮೋ 2:30 ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ. PEPS
|
18. § 2 ಪೂರ್ವ 20:6, ಯೋಬ. 9:12, ದಾನಿ. 4:35 “ದೇವರ ಚಿತ್ತವನ್ನು ಎದುರಿಸುವವರು ಇಲ್ಲದಿರುವಾಗ ಆತನು ತಪ್ಪು ಹುಡುಕುವುದು ಹೇಗೆ” ಎಂದು ನೀನು ನನ್ನನ್ನು ಕೇಳುವಿ.
|
19. ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? * ಯೆಶಾ 29:16, 45:9 ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
|
20. † 2 ತಿಮೊ. 2:20 ಉತ್ತಮವಾದ ಬಳಕೆಗೆ ಒಂದು ಪಾತ್ರೆಯನ್ನೂ, ಹೀನವಾದ ಬಳಕೆಗೆ ಮತ್ತೊಂದು ಪಾತ್ರೆಯನ್ನೂ ಒಂದೇ ಮಣ್ಣಿನ ಮುದ್ದೆಯಿಂದ ಮಾಡುವುದಕ್ಕೆ ‡ ಯೆಶಾ 64:8, ಯೆರ. 18:6 ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ?
|
21. ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
|
22. ಮತ್ತು § ರೋಮಾ. 8:29-30 ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ * ಎಫೆ 3:17 ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
|
23. ಆತನು ಕರುಣಿಸಿದ ನಮ್ಮನ್ನು † ರೋಮಾ. 3:29 ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ‡ ರೋಮಾ. 8:25 ಕರೆದನು.
|
24. ಆ ವಚನವೇನಂದರೆ,
§ ಹೋಶೇ. 2:23, 1:10 “ನನ್ನ ಜನವಲ್ಲದವರನ್ನು ನನ್ನ ಜನರೆಂದು ನನಗೆ ಅಪ್ರಿಯವಾದವಳನ್ನು ಪ್ರಿಯಳೆಂದೂ ಹೇಳುವೆನು. |
25. ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ * ರೋಮಾ. 8:14, ಮತ್ತಾ 16:16 ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ. PEPS
|
26. ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: † ಯೆಶಾ 10:22,23 “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ‡ ರೋಮಾ. 11:5 ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
|
28. * ಯಾಕೋಬ. 5:4 “ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ
† ಆದಿ 19:24-25; ಧರ್ಮೋ 29:23. “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ. PS |
29. {ಇಸ್ರಾಯೇಲ್ಯರನ್ನು ದೇವರು ತಳ್ಳಿಬಿಟ್ಟದ್ದಕ್ಕೆ ಇಸ್ರಾಯೇಲ್ಯರೇ ಕಾರಣ} PS ಹಾಗಾದರೆ ಏನು ಹೇಳೋಣ? ನೀತಿಯನ್ನು ಅನುಸರಿಸದ ‡ ರೋಮಾ. 10:20 ಅನ್ಯಜನರಿಗೆ ನೀತಿಯು ಅಂದರೆ § ರೋಮಾ. 1:17, 3:21-22, 10:6, ಗಲಾ. 2:16, 3:24, ಇಬ್ರಿ. 11:7 ನಂಬಿಕೆಯಿಂದುಂಟಾದ ನೀತಿಯು ದೊರಕಿತು.
|
30. ಆದರೆ ನೀತಿಯನ್ನು ಹಿಂಬಾಲಿಸಿದ್ದ * ರೋಮಾ. 10:2-3, 11:7, ಗಲಾ. 5:4 ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.
|
32. † 1 ಪೇತ್ರ. 2:8 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ,
‡ ಯೆಶಾ 28:16, 8:14, 1 ಪೇತ್ರ. 2:6-7 “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. § ಆತನ ಮೇಲೆ ಆತನಲ್ಲಿ ನಂಬಿಕೆಯಿಡುವವನು * ಯೆಶಾ 49:23, ಯೋವೇ. 2:26-27 ಆಶಾಭಂಗಪಡುವುದಿಲ್ಲ” ಎಂಬುದೇ. PE |