1. {#1ನಲ್ಲ } [QS]ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, [QE][QS2]ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, [QE][QS2]ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, [QE][QS2]ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. [QE][QS2]ಮಿತ್ರರೇ, ತಿನ್ನಿರಿ. [QE][QS2]ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ. [QE]
2. {#1ನಾಲ್ಕನೆಯ ಗೀತೆ - ನಲ್ಲೆ } [QS]ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. [QE][QS2]ಇಗೋ, ಎನ್ನಿನಿಯನು ಕದ ತಟ್ಟಿ, [QE][QS]“ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! [QE][QS2]ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, [QE][QS]ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು. [QE]
3. [QS]“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? [QE][QS2]ಪಾದಗಳನ್ನು ತೊಳೆದುಕೊಂಡೆನಲ್ಲಾ, [QE][QS2]ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ, [QE]
4. [QS]ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, [QE][QS2]ಅವನಿಗಾಗಿ ನನ್ನ ಮನ ಮಿಡಿಯಿತು. [QE]
5. [QS]ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು [QE][QS2]ಅಗುಳಿಯ ಮೇಲೆ ಕೈಯಿಟ್ಟೆನು, [QE][QS2]ನನ್ನ ಕೈಗಳಿಂದ ರಕ್ತಬೋಳವು, [QE][QS2]ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು. [QE]
6. [QS]ನನ್ನ ಇನಿಯನಿಗೆ ಕದ ತೆಗೆದೆನು, [QE][QS2]ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. [QE][QS2]ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. [QE][QS2]ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ. [QE]
7. [QS]ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, [QE][QS2]ಹೊಡೆದು ಗಾಯಪಡಿಸಿದರು, [QE][QS2]ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು. [QE]
8. [QS]ಯೆರೂಸಲೇಮಿನ ಮಹಿಳೆಯರೇ, ನೀವು ನನ್ನ ಕಾಂತನನ್ನು ಕಂಡರೆ [QE][QS2]ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆ ಎಂಬುವುದನ್ನು ಅವನಿಗೆ ತಿಳಿಸಬೇಕೆಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. [QE]
9. {#1ಸ್ತ್ರೀಯರು } [QS]ಸ್ತ್ರೀರತ್ನವೇ, ಇತರರ ಕಾಂತರಿಗಿಂತ ನಿನ್ನ ಕಾಂತನ ವಿಶೇಷತೆಯೇನು? [QE][QS2]ನಮ್ಮಿಂದ ನೀನು ಹೀಗೆ ಪ್ರಮಾಣಮಾಡಿಸುವುದಕ್ಕೆ ಇತರರ ಕಾಂತರಿಗಿಂತ ನಿನ್ನ ಕಾಂತನ ಅತಿಶಯವೇನು? [QE]
10. {#1ನಲ್ಲೆ } [QS]ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; [QE][QS2][* ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. ಅಥವಾ ನನ್ನ ನಲ್ಲನು ಬಿಳುಪು ಮತ್ತು ಕೆಂಪು ಬಣ್ಣವುಳ್ಳವನು. ಅವನಿಗೆ ಸಮಾನರು ಯಾರು ಇಲ್ಲ ]ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. [QE]
11. [QS]ಅವನ ತಲೆಯು ಚೊಕ್ಕ ಬಂಗಾರದಂತಿದೆ, [QE][QS2]ಗುಂಗುರು ಗುಂಗುರಾಗಿರುವ ಅವನ ಕೂದಲು ಕಾಗೆಯಂತೆ ಕಪ್ಪಾಗಿದೆ. [QE]
12. [QS]ಅವನ ಕಣ್ಣುಗಳೋ ತುಂಬಿತುಳುಕುವ ತೊರೆಗಳ ಹತ್ತಿರ ತಂಗುವ, [QE][QS2]ಕ್ಷೀರದಲ್ಲಿ ಸ್ನಾನಮಾಡುವ ಪಾರಿವಾಳಗಳಂತಿವೆ. [QE]
13. [QS]ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ [QE][QS2]ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ; [QE][QS2]ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ. [QE]
14. [QS]ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, [QE][QS2]ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ. [QE]
15. [QS]ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; [QE][QS2]ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ. [QE]
16. [QS]ಅವನ ನುಡಿ ಮಧುರ, [QE][QS2]ಅವನು ಸರ್ವಾಂಗ ಸುಂದರ. [QE][QS2]ಯೆರೂಸಲೇಮಿನ ಸ್ತ್ರೀಯರುಗಳಿರಾ, [QE][QS]ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು. [QE]