1. {ನಲ್ಲೆ} PS ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು!
ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ. |
2. ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು,
ಅಲ್ಲಿ ಆಕೆಯು ನಿನಗೆ * ಆಕೆಯು ನಿನಗೆ ಅಥವಾ ನೀನು ನನಗೆ. ಉಪದೇಶ ಮಾಡಬಹುದಾಗಿತ್ತು; ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ, ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು. |
4. ಯೆರೂಸಲೇಮಿನ ಮಹಿಳೆಯರೇ,
ಆತನು ತಾನಾಗಿ ಎಚ್ಚರಗೊಳ್ಳುವವರೆಗೆ ಯಾರೂ ನನ್ನ ಪ್ರಿಯನನ್ನು ಎಚ್ಚರಿಸದಿರಿ, ಆತನ ವಿಶ್ರಾಂತಿಗೆ ಯಾರೂ ಭಂಗ ಮಾಡದಿರಿ ಎಂದು ವನದ ಜಿಂಕೆ ಹರಿಣಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ. |
5. {ಸ್ತ್ರೀಯರು} PS ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು?
ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು. |
6. ನಿನ್ನ ಕೈಯಲ್ಲಿನ ಮುದ್ರೆಯ ಹಾಗೆ ನಿನ್ನ ಹೃದಯದ ಮೇಲೆ ನನ್ನನ್ನು ಧರಿಸಿಕೋ.
ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ, ಪ್ರೀತಿದ್ರೋಹದಿಂದ ಹುಟ್ಟುವ ಮತ್ಸರವು ಪಾತಾಳದಷ್ಟು ಕ್ರೂರ, ಅದರ ಜ್ವಾಲೆಯು ಬೆಂಕಿಯ ಉರಿ, ಧಗಧಗಿಸುವ ಕೋಪಾಗ್ನಿ. |
7. ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು,
ಮುಣುಗಿಸಲಾರವು ಅದನ್ನು ಪ್ರವಾಹಗಳು. ಪ್ರೀತಿಯನ್ನು ಗಳಿಸಲು ಮನೆಮಾರುಗಳನ್ನು ಮಾರಿದರೂ ಸಿಗುವುದು ಅವನಿಗೆ † ಅವನಿಗೆ ಅಥವಾ ಅದಕ್ಕೆ. ತಿರಸ್ಕಾರ. ಆರನೆಯ ಗೀತೆ - ಸೋದರರು |
10. {ನಲ್ಲೆ} PS ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು,
ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. ‡ ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು. ಅಥವಾ ಆಗ ನನ್ನ ಪ್ರಿಯನು ನಾನು ಪ್ರೌಢಳೆಂದು ಯೋಚಿಸುತ್ತಾನೆ. |
11. ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು,
ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು § ಬೆಳ್ಳಿ ನಾಣ್ಯಗಳನ್ನು ಒಂದು ಬೆಳ್ಳಿ ನಾಣ್ಯವು ಒಂದು ದಿನ ಕೂಲಿಗೆ ಸಮ. . |
12. ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ,
ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ. |