1. {#1ನಲ್ಲ } [QS]ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! [QE][QS2]ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ. [QE]
2. [QS]ನಿನ್ನ ಹೊಕ್ಕಳು ಮಿಶ್ರಪಾನ ತುಂಬಿದ ಗುಂಡು ಬಟ್ಟಲು, [QE][QS2]ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿಯ ರಾಶಿ. [QE]
3. [QS]ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ. [QE]
4. [QS]ನಿನ್ನ ಕೊರಳು ದಂತದ ಗೋಪುರ, [QE][QS2]ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್ ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. [QE][QS2]ನಿನ್ನ ಮೂಗು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನಂತಿದೆ. [QE]
5. [QS]ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, [QE][QS2]ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, [QE][QS2]ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ. [QE]
6. [QS]ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ [QE][QS2]ನೀನೆಷ್ಟು ಸುಂದರ, ನೀನೆಷ್ಟು ಮನೋಹರ! [QE]
7. [QS]ನೀಳವಾದ ನಿನ್ನ ಆಕಾರವು ಖರ್ಜೂರದ ಮರ, [QE][QS2]ನಿನ್ನ ಸ್ತನಗಳೇ ಅದರ ಗೊಂಚಲುಗಳು. [QE]
8. [QS]ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. [QE][QS2]ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, [QE][QS2]ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು. [QE]
9. {#1ನಲ್ಲೆ } [QS]ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ,[* ಉತ್ತಮ ದ್ರಾಕ್ಷಾರಸದ ಹಾಗಿರಲಿ, ಅಥವಾ ನಿನ್ನ ಬಾಯು ಉತ್ತಮ ದ್ರಾಕ್ಷಾರಸದಂತಿರಲಿ. ] [QE][QS2]ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು. [QE]
10. [QS]ನಾನು ನನ್ನ ನಲ್ಲನ ನಲ್ಲೆ, [QE][QS2]ಅವನ ಆಶೆಯು ನನ್ನ ಮೇಲೆ. [QE]
11. [QS]ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, [QE][QS2]ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ[† ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ ಅಥವಾ ಅಡವಿಯ ಹೂವುಗಳ ಮಧ್ಯದಲ್ಲಿ ವಾಸಮಾಡುವ. ]! [QE]
12. [QS]ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, [QE][QS2]ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, [QE][QS2]ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು. [QE]
13. [QS]ಕಾಮಜನಕ ವೃಕ್ಷಗಳು[‡ ಕಾಮಜನಕ ವೃಕ್ಷಗಳು ಮ್ಯಾಂಡ್ರೇಕ್ಸ್: ಅತ್ಯಂತ ಸಿಹಿಯಾದ ವಾಸನೆಯ ಹೂವುಗಳುಳ್ಳ, ಲೈಂಗಿಕ ಆಸೆಯನ್ನು ಹುಟ್ಟಿಸುವ ಮತ್ತು ಫಲವತ್ತತೆಯನ್ನು ಉತ್ತೇಜಿಸುವ ಹಣ್ಣನ್ನು ಉತ್ಪತ್ತಿ ಮಾಡುವ ಒಂದು ವೃಕ್ಷವಾಗಿದೆ ಎಂದು ನಂಬಲಾಗಿದೆ (ಆದಿ 30:14-16). ] ಪರಿಮಳ ಬೀರುತ್ತಿವೆ, ನನ್ನ ಕಾಂತನೇ, [QE][QS2]ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು [QE][QS2]ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ. [QE]