1. [PS]ದೇವರ ಸೇವಕನೂ, [* 2 ಕೊರಿ 1:1 ]ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.
2. ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. [PE]
3. [PS]ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.
4. ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. [PE]
5. {#1ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು } [PS]ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.
6. [† 1 ತಿಮೊ. 3:1-4 ]ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.
7. ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, [‡ 1 ತಿಮೊ. 3:8; 1 ಪೇತ್ರ 5:2 ]ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,
8. ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, [§ 1 ಕೊರಿ 9:25 ]ಜಿತೇಂದ್ರಿಯನೂ ಆಗಿದ್ದು,
9. ತಾನು [* 1 ತಿಮೊ. 1:10 ]ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ [† 2 ಥೆಸ. 2:13-15 ]ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. [PE]
10. [PS]ಅನೇಕರು, ಪ್ರಮುಖವಾಗಿ [‡ ಅ. ಕೃ. 10:45; 11:2 ]ಸುನ್ನತಿಹೊಂದಿದವರು, [§ 1 ತಿಮೊ. 1:6 ]ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.
11. ಅವರು [* 1 ತಿಮೊ. 6:5; 2 ಪೇತ್ರ. 2:3 ]ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ [† 2 ತಿಮೊ. 3:6 ]ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ.
12. “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು [‡ ಅ. ಕೃ. 17:28 ]ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.
13. ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು [§ 1 ತಿಮೊ. 1:4 ]ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ [* ಕೊಲೊ 2:22 ]ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ,
14. [† ತೀತ. 2:1-2 ]ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ [‡ ತೀತ. 2:15; 1 ತಿಮೊ. 5:20 ]ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. [PE]
15. [PS] [§ ಲೂಕ 11:41; 1 ತಿಮೊ. 4:3; ಅ. ಕೃ. 10:15 ]ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, [* ರೋಮಾ. 14:23 ]ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.
16. [† 1 ಯೋಹಾ 2:4 ]ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ. [PE]