1. {#1ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಬೋಧನೆ } [PS]ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2. ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯುಳ್ಳವರು ಆಗಿರಬೇಕೆಂದು ಬೋಧಿಸು.
3. ಹಾಗೆಯೇ, ವೃದ್ಧ ಸ್ತ್ರೀಯರು [* 1 ತಿಮೊ. 3:11 ]ಚಾಡಿಹೇಳುವವರೂ [† 1 ತಿಮೊ. 3:8; 5:2 ]ಮದ್ಯಕ್ಕೆ ಅಧೀನರಾಗಿರದೆ [‡ 1 ತಿಮೊ. 2:9 ]ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.
4. ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, [§ 1 ತಿಮೊ. 6:1 ]ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5. [* 1 ತಿಮೊ. 5:14 ] ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ [† ಆದಿ 3:16 ]ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
6. ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು[‡ 1 ತಿಮೊ 5:1 ].
7. ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ [§ 2 ಕೊರಿ 11:3 ]ಸತ್ಯವೂ [* 1 ತಿಮೊ 2:2 ]ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ [† 1 ತಿಮೊ 6:3 ]ಸುಬುದ್ಧಿಯೂ ಇರಬೇಕು;
8. [‡ ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16 ]ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
9. [§ 1 ಪೇತ್ರ 2:18; ಕೊಲೊ 3:22 ]ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
10. ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ [* ಮತ್ತಾ 5:16; ಫಿಲಿ 2:15 ]ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
11. ಏಕೆಂದರೆ [† 1 ತಿಮೊ 2:4 ]ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು [‡ ತೀತ 3:4 ]ಪ್ರತ್ಯಕ್ಷವಾಯಿತು;
12. ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ [§ ತೀತ 1:2 ]ನಿರೀಕ್ಷೆಯನ್ನು,
13. ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
14. [* ಕೀರ್ತ 130:8; 1 ಪೇತ್ರ 1:18-19 ]ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ [† ತೀತ 3:8; ಎಫೆ 2:10 ]ಸತ್ಕ್ರಿಯೆಗಳಲ್ಲಿ ಆಸಕ್ತರಾದ [‡ ಯೆಹೆ 37:23; ವಿಮೋ 19:5 ]ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ [§ 1 ತಿಮೊ 2:6 ]ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. [PE]
15. [PS]ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ [* ತೀತ 1:13; 1 ತಿಮೊ 5:20 ]ಖಂಡಿಸುತ್ತಾ ಇರು. [† 1 ತಿಮೊ 4:12 ]ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ. [PE]