ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ತೀತನಿಗೆ
1. {#1ಕ್ರೈಸ್ತ ವಿಶ್ವಾಸಿಗಳ ಒಳ್ಳೆ ನಡತೆ ಬೋಧನೆ } [PS] [* ರೋಮಾ 13:1; 1 ಪೇತ್ರ 2:13 ]ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ,
2. ಯಾರನ್ನೂ ದೂಷಿಸದೆ, [† 1 ತಿಮೊ 3:3 ]ಕುತರ್ಕ ಮಾಡದೆ [‡ 2 ತಿಮೊ 2:25 ]ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.
3. [§ 1 ಕೊರಿ 6:11 ]ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
4. ಆದರೆ ನಮ್ಮ ರಕ್ಷಕನಾದ ದೇವರ [* ರೋಮಾ 2:4 ]ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,
5. [† ರೋಮಾ 3:27 ]ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ [‡ ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ]ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ [§ ರೋಮಾ 12:2 ]ನವೀಕರಣದ ಮೂಲಕವಾಗಿಯೂ ಆತನು [* ಎಫೆ 2:4; 1 ಪೇತ್ರ 1:3 ]ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
6. (6-7)ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು [† ತೀತ 1:2 ]ನಿತ್ಯಜೀವದ ನಿರೀಕ್ಷೆಗೆ [‡ ರೋಮಾ. 8:17 ]ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ [§ ಯೋವೇ. 2:28; ಅ. ಕೃ 2:33; 10:45. ರೋಮಾ 5:5 ]ಸುರಿಸಿದನು.
7.
8. [* 1 ತಿಮೊ. 1:15 ]ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
9. ಆದರೆ ಬುದ್ಧಿಯಿಲ್ಲದ [† 1 ತಿಮೊ. 6:4 ]ತರ್ಕಗಳಿಂದಲೂ, [‡ 1 ತಿಮೊ. 1:4 ]ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; [§ 2 ತಿಮೊ 2:14 ]ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ.
10. ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು [* ಮತ್ತಾ 18:15. 2 ಥೆಸ 3:15; ಯಾಕೋಬ 5:19 ]ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;
11. ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ. [PE]
12. {#1ಕಡೆ ಮಾತುಗಳು } [PS]ನಾನು [† 2 ತಿಮೊ. 4:10 ]ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ [‡ 2 ತಿಮೊ. 4:12 ]ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.
13. ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು [§ ಅ. ಕೃ 18:24 ]ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು.
14. ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.
15. ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. [PE][QS2][* ಕೊಲೊ 4:18 ] ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.[QE]
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
ಕ್ರೈಸ್ತ ವಿಶ್ವಾಸಿಗಳ ಒಳ್ಳೆ ನಡತೆ ಬೋಧನೆ 1 * ರೋಮಾ 13:1; 1 ಪೇತ್ರ 2:13 ಅಧಿಪತಿಗಳಿಗೂ, ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕಂತಲೂ, ಸಕಲಸತ್ಕಾರ್ಯಗಳನ್ನು ಮಾಡುವುದಕ್ಕೆ ಸಿದ್ಧರಾಗಿರಬೇಕೆಂತಲೂ, 2 ಯಾರನ್ನೂ ದೂಷಿಸದೆ, 1 ತಿಮೊ 3:3 ಕುತರ್ಕ ಮಾಡದೆ ‡ 2 ತಿಮೊ 2:25 ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು. 3 § 1 ಕೊರಿ 6:11 ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು. 4 ಆದರೆ ನಮ್ಮ ರಕ್ಷಕನಾದ ದೇವರ * ರೋಮಾ 2:4 ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ, 5 ರೋಮಾ 3:27 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ‡ ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ § ರೋಮಾ 12:2 ನವೀಕರಣದ ಮೂಲಕವಾಗಿಯೂ ಆತನು * ಎಫೆ 2:4; 1 ಪೇತ್ರ 1:3 ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು. 6 (6-7)ನಾವು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಿಂದ ನೀತಿವಂತರೆಂದು ನಿರ್ಣಯಿಸಲ್ಪಟ್ಟು ತೀತ 1:2 ನಿತ್ಯಜೀವದ ನಿರೀಕ್ಷೆಗೆ ‡ ರೋಮಾ. 8:17 ಬಾಧ್ಯರಾಗುವಂತೆ ದೇವರು ಆತನ ಮೂಲಕ ಪವಿತ್ರಾತ್ಮನನ್ನು ನಮ್ಮ ಮೇಲೆ ಹೇರಳವಾಗಿ § ಯೋವೇ. 2:28; ಅ. ಕೃ 2:33; 10: 45. ರೋಮಾ 5:5 ಸುರಿಸಿದನು. 7 8 * 1 ತಿಮೊ. 1:15 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ. 9 ಆದರೆ ಬುದ್ಧಿಯಿಲ್ಲದ 1 ತಿಮೊ. 6:4 ತರ್ಕಗಳಿಂದಲೂ, ‡ 1 ತಿಮೊ. 1:4 ವಂಶಾವಳಿಗಳಿಂದಲೂ, ಜಗಳಗಳಿಂದಲೂ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಾಗ್ವಾದಗಳಿಂದಲೂ ದೂರವಾಗಿರು; § 2 ತಿಮೊ 2:14 ಅವು ನಿಷ್ಪ್ರಯೋಜಕವೂ ವ್ಯರ್ಥವೂ ಆಗಿವೆ. 10 ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು * ಮತ್ತಾ 18: 15. 2 ಥೆಸ 3:15; ಯಾಕೋಬ 5:19 ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು; 11 ಅಂಥವನು ಸನ್ಮಾರ್ಗದಿಂದ ದೂರವಾದವನೂ ಪಾಪಮಾಡುವವನೂ ಆಗಿದ್ದಾನೆ; ತಾನು ಶಿಕ್ಷೆಗೆ ಅರ್ಹನೆಂದು ಅವನ ಮನಸ್ಸೇ ನಿರ್ಣಯ ಮಾಡುತ್ತದೆ. ಕಡೆ ಮಾತುಗಳು 12 ನಾನು 2 ತಿಮೊ. 4:10 ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ‡ 2 ತಿಮೊ. 4:12 ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು. 13 ನ್ಯಾಯಶಾಸ್ತ್ರಿಯಾದ ಜೇನನನ್ನೂ ಮತ್ತು § ಅ. ಕೃ 18:24 ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಕಳುಹಿಸಿಕೊಡು; ಅವರಿಗೇನೂ ಕೊರತೆಯಾಗಬಾರದು. 14 ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ. 15 ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು. * ಕೊಲೊ 4:18 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
ಒಟ್ಟು 3 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 3
1 2 3
×

Alert

×

Kannada Letters Keypad References