ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಜೆಕರ್ಯ
1. {ಯೆರೂಸಲೇಮಿನ ಬಿಡುಗಡೆ} [PS] ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ,
2. “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.
3. ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.”
4. ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.
5. ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರೂ, ಸೇನಾಧೀಶ್ವರನಾದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು. [PE][PS]
6. “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;
7. ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
8. ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.
9. ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.” [PS]
10. {ಇಸ್ರಾಯೇಲರ ಪಶ್ಚಾತ್ತಾಪ} [PS] ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
11. ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು. [PE][PS]
12. ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ;
13. ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ,
14. ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು. [PE]

ಟಿಪ್ಪಣಿಗಳು

No Verse Added

ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
ಜೆಕರ್ಯ 12:7
ಯೆರೂಸಲೇಮಿನ ಬಿಡುಗಡೆ 1 ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶ ಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ, ಮನುಷ್ಯರೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ, 2 “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು. 3 ಆ ದಿನದಲ್ಲಿ ನಾನು ಯೆರೂಸಲೇಮನ್ನು ಸಮಸ್ತ ಜನಗಳಿಗೂ, ಭಾರೀ ಬಂಡೆಯನ್ನಾಗಿ ಮಾಡುವೆನು; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಲೋಕದ ಸಕಲ ರಾಜ್ಯಗಳು ಅದನ್ನೆತ್ತಿ ಹಾಕಲು ಕೂಡಿಬರುವವು.” 4 ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು. 5 ಆಗ ಯೆಹೂದದ ಕುಲಪತಿಗಳು ತಮ್ಮ ಮನಸ್ಸಿನೊಳಗೆ, ‘ಯೆರೂಸಲೇಮಿನವರು ತಮ್ಮ ದೇವರೂ, ಸೇನಾಧೀಶ್ವರನಾದ ಯೆಹೋವನಲ್ಲಿ ಬಲಗೊಂಡು ನಮಗೆ ತ್ರಾಣವಾಗಿದ್ದಾರೆ’ ಅಂದುಕೊಳ್ಳುವರು. 6 “ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು; 7 ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು; 8 ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು. 9 ಯೆರೂಸಲೇಮಿನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.” ಇಸ್ರಾಯೇಲರ ಪಶ್ಚಾತ್ತಾಪ 10 ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು. 11 ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು. 12 ದೇಶವೆಲ್ಲಾ ಗೋಳಾಡುವುದು, ಒಂದೊಂದು ಕುಟುಂಬವು ಬೇರೆ ಬೇರೆಯಾಗಿ ಗೋಳಾಡುವುದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; 13 ಲೇವಿ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ; ಶಿಮ್ಮಿಯ ಸಂತಾನದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ, 14 ಉಳಿದ ಕುಟುಂಬಗಳೆಲ್ಲಾ ಬೇರೆ ಬೇರೆ, ಒಂದೊಂದರಲ್ಲಿಯೂ ಹೆಂಗಸರು, ಗಂಡಸರು ಬೇರೆ ಬೇರೆ, ಹೀಗೆ ಬೇರೆ ಬೇರೆಯಾಗಿಯೇ ಗೋಳಾಡುವರು.
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 12 / 14
1 2 3 4 5 6 7 8 9 10 11 12 13 14
Common Bible Languages
West Indian Languages
×

Alert

×

kannada Letters Keypad References