ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಜೆಕರ್ಯ
1. {#1ದೇಶದ ಶುದ್ಧೀಕರಣ } [PS]ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
2. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.
3. ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. [PE]
4. [PS]“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
5. ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.[* ರೈತನಾಗಿದ್ದೇನೆಒಬ್ಬನು ನನ್ನನ್ನು ಚಿಕ್ಕ ವಯಸ್ಸಿನಿಂದಲೂ ಗುಲಾಮನ್ನಾಗಿಸಿಕೊಂಡಿದ್ದಾನೆ. ]’ ಎಂದು ಹೇಳಲು,
6. ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’ ” ಎಂದು ಉತ್ತರ ಕೊಡುವನು. [PE]
7. {#1ಮಂದೆಗಾಗುವ ಹಿಂಸೆ, ಉಳಿದ ಕುರಿಗಳಿಗೆ ಲಭಿಸುವ ಸುಫಲ }
8. [PS]ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. [PE][PS]“ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ.
9. “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.” [PE]
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 14
1 2 3 4 5 6 7 8 9 10 11 12 13 14
ದೇಶದ ಶುದ್ಧೀಕರಣ 1 ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು. 2 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು. 3 ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು. 4 “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು; 5 ಒಬ್ಬನು, ‘ನಾನು ಪ್ರವಾದಿಯಲ್ಲ, ಹೊಲದ ಕೆಲಸದವನು; ಚಿಕ್ಕ ವಯಸ್ಸಿನಿಂದಲೂ ರೈತನಾಗಿದ್ದೇನೆ.* ರೈತನಾಗಿದ್ದೇನೆಒಬ್ಬನು ನನ್ನನ್ನು ಚಿಕ್ಕ ವಯಸ್ಸಿನಿಂದಲೂ ಗುಲಾಮನ್ನಾಗಿಸಿಕೊಂಡಿದ್ದಾನೆ. ’ ಎಂದು ಹೇಳಲು, 6 ಮತ್ತೊಬ್ಬನು ಅವನನ್ನು, ‘ನಿನ್ನ ಎದೆಯ ಮೇಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ ಅವನು, ‘ಮಿತ್ರರ ಮನೆಯಲ್ಲಿ ನನಗಾದ ಗಾಯಗಳು’ ” ಎಂದು ಉತ್ತರ ಕೊಡುವನು. ಮಂದೆಗಾಗುವ ಹಿಂಸೆ, ಉಳಿದ ಕುರಿಗಳಿಗೆ ಲಭಿಸುವ ಸುಫಲ 7 8 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ. “ದೇಶದೊಳಗೆಲ್ಲಾ ಮೂರರಲ್ಲಿ ಎರಡು ಭಾಗದವರು ಹತರಾಗಿ ಸಾಯುವರು, ಮೂರನೆಯ ಭಾಗದವರು ಅಲ್ಲಿ ಉಳಿಯುವರು” ಇದು ಯೆಹೋವನ ನುಡಿ. 9 “ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”
ಒಟ್ಟು 14 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 13 / 14
1 2 3 4 5 6 7 8 9 10 11 12 13 14
×

Alert

×

Kannada Letters Keypad References