1. {#1ಅಳತೆಯ ನೂಲಿನ ವಿಷಯವಾದ ದರ್ಶನ } [PS]ನಾನು ಕಣ್ಣಿತ್ತಿ ನೋಡಲು ಇಗೋ, ಕೈಯಲ್ಲಿ ಅಳತೆಯ ನೂಲನ್ನು ಹಿಡಿದುಕೊಂಡಿದ್ದವನು ಕಾಣಿಸಿದನು.
2. ನಾನು ಅವನನ್ನು, “ಎಲ್ಲಿಗೆ ಹೋಗುತ್ತಿ?” ಎಂದು ಕೇಳಲು ಅವನು ನನಗೆ, “ಯೆರೂಸಲೇಮಿನ ಅಗಲ, ಉದ್ದ ಎಷ್ಟಿರಬೇಕೆಂದು ಅಳೆದು ನೋಡುವುದಕ್ಕೆ ಹೋಗುತ್ತಿದ್ದೇನೆ” ಎಂದು ಹೇಳಿದನು. [PE]
3. [PS]ನನ್ನ ಸಂಗಡ ಮಾತನಾಡಿದ ದೇವದೂತನು ಬರುತ್ತಿರಲು ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು ಹೀಗೆ ಹೇಳಿದನು,
4. “ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, [PE][QS]‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ [QE][QS]ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು. [QE]
5. [QS]ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, [QE][QS]ಅದರೊಳಗೆ ವೈಭವವೂ ಆಗಿರುವೆನು’ ” ಎಂಬುದು ಯೆಹೋವನ ನುಡಿ. [QE]
6. {#1ಸೆರೆಯಾಗಿ ಬಾಬೆಲಿನಲ್ಲಿ ಇರುವವರು ಚೀಯೋನಿಗೆ ಮರಳಿ ಬರಬೇಕೆಂಬ ಕರೆ } [PS]ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; [PE][QS]ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ. [QE]
7. [QS]ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ. [QE]
8. [QS]ನಿಮ್ಮನ್ನು ತಾಕುವವನು ನನ್ನ[* ನನ್ನ ಅಥವಾ ಆತನ. ] ಕಣ್ಣು ಗುಡ್ಡೆಯನ್ನು ತಾಕುವವನಾಗಿದ್ದಾನೆ. [QE][QS]ಆದಕಾರಣ ತನ್ನ ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ, [QE]
9. [QS]“ಆಹಾ, ನಾನು ಇವರ ಮೇಲೆ ಕೈಬೀಸುವೆನು; ಇವರು ತಮಗೆ ಅಡಿಯಾಳಾದವರಿಗೆ ಸೂರೆಯಾಗುವರು” ಎಂದು ಹೇಳುತ್ತಾನೆ. [QE][QS]ಆಗ ಸೇನಾಧೀಶ್ವರ ಯೆಹೋವನು ನನ್ನನ್ನು ಕಳುಹಿಸಿದ್ದಾನೆಂಬುದು ನಿಮಗೆ ಗೊತ್ತಾಗುವುದು. [QE]
10. [QS]ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! [QE][QS]ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು. [QE]
11. [QS]ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; [QE][QS]ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು. [QE]
12. [QS]ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು, [QE][QS]ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು. [QE]
13. [QS]ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. [QE]